AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಮೇ 1ರವರೆಗೆ ಕರ್ನಾಟಕದಲ್ಲಿ ಮಳೆ ಸಾಧ್ಯತೆ; ಹಲವು ರಾಜ್ಯಗಳಲ್ಲಿ ಉಷ್ಣ ಅಲೆಯ ಆತಂಕ

Karnataka Weather Today: ಇಂದಿನಿಂದ ಮೇ 1ರವರರೆಗೂ ರಾಜ್ಯದಲ್ಲಿ ಅಲ್ಲಲ್ಲಿ ತುಂತುರು ಮಳೆ, ಇನ್ನು ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಮೇ 1ರವರೆಗೆ ಕರ್ನಾಟಕದಲ್ಲಿ ಮಳೆ ಸಾಧ್ಯತೆ; ಹಲವು ರಾಜ್ಯಗಳಲ್ಲಿ ಉಷ್ಣ ಅಲೆಯ ಆತಂಕ
ಮಳೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Apr 28, 2022 | 5:50 AM

Share

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎರಡರಿಂದ ಮೂರು ದಿನಗಳಿಂದ ಮಳೆ ಉಂಟಾಗಿದೆ. ಇಂದು ಕೂಡ ಬೆಳಗಾವಿ, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ, ಕೊಡಗಿನಲ್ಲಿ (Rainfall) ಮಳೆಯಾಗಲಿದೆ. ಇಂದಿನಿಂದ ಮೇ 1ರವರರೆಗೂ ರಾಜ್ಯದಲ್ಲಿ ಅಲ್ಲಲ್ಲಿ ತುಂತುರು ಮಳೆ, ಇನ್ನು ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಏಪ್ರಿಲ್ 30ರಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಮಳೆ ಕಡಿಮೆಯಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ.

ಇಂದು ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮಡಿಕೇರಿ, ಸೋಮವಾರಪೇಟೆ, ಮೂಡಿಗೆರೆ, ಆಗುಂಬೆ, ಶೃಂಗೇರಿ, ಕೊಪ್ಪ, ಹೊಸನಗರ, ಸಾಗರ, ತೀರ್ಥಹಳ್ಳಿಯ ಸುತ್ತಮುತ್ತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಗಡಿಯಲ್ಲೂ ಮಳೆಯಾಗಲಿದೆ.

ಕರ್ನಾಟಕದ ಬೆಳಗಾವಿ, ಕೊಪ್ಪಳ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ. 1ರವರೆಗೂ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲುನೊಂದಿಗೆ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಹೆಚ್ಚಾಗಲಿದೆ. ಇದಲ್ಲದೆ, ಕೇರಳದಲ್ಲಿ ಮಾರ್ಚ್ 31ರ ಅಂತ್ಯದ ವೇಳೆಗೆ ಮಳೆಯ ಪ್ರಮಾಣ ಶೇ. 98ರಷ್ಟು ಹೆಚ್ಚಾಗಿದೆ. ಮಧ್ಯ ಭಾರತ ಮತ್ತು ಉತ್ತರ ಭಾರತದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆಯ ಚಟುವಟಿಕೆಯು ಕಳಪೆ ಮಟ್ಟದಲ್ಲಿದ್ದರೂ, ದಕ್ಷಿಣ ಭಾರತದಲ್ಲಿ ಮಳೆ ಉತ್ತಮವಾಗಿದೆ. ತಮಿಳುನಾಡಿನಲ್ಲಿ ಶೇ. 42, ಕರಾವಳಿ ಕರ್ನಾಟಕದಲ್ಲಿ ಶೇ. 143, ಉತ್ತರ ಒಳ ಕರ್ನಾಟಕದಲ್ಲಿ ಶೇ 43, ದಕ್ಷಿಣ ಒಳನಾಡಿನಲ್ಲಿ ಶೇ. 84ರಷ್ಟು ಹೆಚ್ಚುವರಿ ಮಳೆಯಾಗಿದೆ.

ಮೇ 1ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ ವರುಣನ ಆರ್ಭಟ ಹೆಚ್ಚಾಗಲಿದೆ. ಕರ್ನಾಟಕದ ಹೆಚ್ಚಿನ ಪ್ರದೇಶಗಳಲ್ಲಿ ಮಳೆಗಿಂತ ಗುಡುಗು, ಸಿಡಿಲುಗಳ ಆರ್ಭಟ ಜೋರಾಗಿದೆ. ಕರ್ನಾಟಕ ಮಾತ್ರವಲ್ಲದೆ ಇಂದಿನಿಂದ ಈಶಾನ್ಯ ಭಾರತದಲ್ಲಿ ಮಿಂಚು, ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಹವಾಮಾನ ಇಲಾಖೆಯು ಗುಜರಾತ್‌ನಲ್ಲಿ ಇಂದಿನವರೆಗೆ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ. ಇಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್-ಮಣಿಪುರ-ಮಿಜೋರಾಂ-ತ್ರಿಪುರಾದಲ್ಲಿ ಲಘು ಮಳೆಯಾಗಲಿದೆ. ಇಂದು ಉಪ-ಹಿಮಾಲಯದ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಈ ಹವಾಮಾನ ಪರಿಸ್ಥಿತಿಗಳೊಂದಿಗೆ ಇಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಬಿಹಾರ, ಜಾರ್ಖಂಡ್, ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ ಕೂಡ ಉಷ್ಣ ಅಲೆ ಉಂಟಾಗಲಿದೆ.

ಇಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗಲಿದೆ. ಏಪ್ರಿಲ್ 29ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಮಿಂಚು ಮತ್ತು ಬಿರುಗಾಳಿ, ಗುಡುಗು ಸಹಿತ ಮಳೆಯಾಗುತ್ತದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಇನ್ನೆರಡು ದಿನ ಗುಡುಗು, ಭಾರೀ ಮಳೆ

Karnataka Rain: ಕರಾವಳಿ, ಕೊಡಗು, ಹಾಸನ, ಉತ್ತರ ಕರ್ನಾಟಕದಲ್ಲಿ ಇಂದು ತುಂತುರು ಮಳೆ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ