Monsoon 2022: ಕರ್ನಾಟಕದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಆದರೆ, ರಾಜ್ಯಾದ್ಯಂತ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಕರ್ನಾಟಕದಲ್ಲಿ ಮಳೆಯಿಂದಾಗಿ 73 ಜನ ಸಾವನ್ನಪ್ಪಿದ್ದಾರೆ.
ತುಂಗಾಭದ್ರಾ ಅಣೆಕಟ್ಟಿನಿಂದ ಕನಿಷ್ಠ 1 ಲಕ್ಷ ಕ್ಯೂಸೆಕ್ ನೀರನ್ನು ಈ ಪ್ರದೇಶದಲ್ಲಿ ಭಾರೀ ಮಳೆಯ ನಂತರ ಬಿಡುಗಡೆ ಮಾಡಲಾಗಿದೆ. ಒಟ್ಟಾರೆಯಾಗಿ, 33 ಪ್ರವಾಹ ಗೇಟ್‌ಗಳನ್ನು ತೆರೆಯಲಾಯಿತು. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಉಂಟಾಗಿದೆ. ಜೊತೆಗೆ, ನೈಋತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಸೇರಿ 5 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Karnataka Rain: ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ
ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 65 ಕಿ.ಮೀ. ತಲುಪುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ವಿಪತ್ತು ನಿರ್ವಹಣಾ ಇಲಾಖೆ ಸೂಚಿಸಿದೆ. ಕೆಲವು ಜಿಲ್ಲೆಗಳಲ್ಲಿ ಮಾತ್ರ ವರುಣನ ಆರ್ಭಟ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಒಟ್ಟು 31 ಜಿಲ್ಲೆಗಳ ಪೈಕಿ ಸುಮಾರು 7 ಜಿಲ್ಲೆಗಳಲ್ಲಿ ಮಾತ್ರ ಇಂದು ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಕರ್ನಾಟಕ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು ದಕ್ಷಿಣ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಮಳೆಯಿಂದ 73 ಜನ ಸಾವು:
ಕರ್ನಾಟಕದಲ್ಲಿ ಮಳೆಯಿಂದ 75 ಪರಿಹಾರ ಶಿಬಿರಗಳಲ್ಲಿ 7,386 ಜನರು ಆಶ್ರಯ ಪಡೆದಿದ್ದು, 73 ಜನರು ಸಾವನ್ನಪ್ಪಿದ್ದಾರೆ. ಅತಿವೃಷ್ಟಿಯಿಂದ 14 ಜಿಲ್ಲೆಗಳ 161 ಗ್ರಾಮಗಳು ತೀವ್ರ ಹಾನಿಗೊಳಗಾಗಿವೆ. ಇತ್ತೀಚಿನ ದಿನಗಳಲ್ಲಿ 21,727 ಜನರು ಪ್ರವಾಹಕ್ಕೆ ಸಿಲುಕಿದ್ದಾರೆ. ಸಿಡಿಲು ಬಡಿದು 15 ಮಂದಿ, ಮರ ಕುಸಿತದಿಂದ 19 ಮಂದಿ, ಮನೆ ಕುಸಿತದಿಂದ 19 ಮಂದಿ, ನದಿಗಳಲ್ಲಿ 24 ಮಂದಿ, ಭೂಕುಸಿತದಿಂದ 9 ಮಂದಿ ಮತ್ತು ವಿದ್ಯುತ್ ಸ್ಪರ್ಶದಿಂದ 15 ಮಂದಿ ಸಾವನ್ನಪ್ಪಿದ್ದು, 73 ಮಂದಿ ಸಾವನ್ನಪ್ಪಿದ್ದಾರೆ. 8,197 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. 75 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, 7,386 ಜನರು ಆಶ್ರಯ ಪಡೆದಿದ್ದಾರೆ.
ಇದನ್ನೂ ಓದಿ: Karnataka Rain: ಕರಾವಳಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯಿಂದ ಇಂದು ಆರೆಂಜ್ ಅಲರ್ಟ್ ಘೋಷಣೆ
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕರ್ನಾಟಕ ಮಾತ್ರವಲ್ಲದೆ ಪಶ್ಚಿಮ ಬಂಗಾಳದ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ಕೊಂಕಣ, ಗೋವಾ, ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್ ಮತ್ತು ರಾಜಸ್ಥಾನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡ, ಹರಿಯಾಣ, ದೆಹಲಿ, ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಮಿಂಚಿನ ಸಂಭವವಿದೆ. ತಮಿಳುನಾಡು, ಲಕ್ಷದ್ವೀಪ, ಬಿಹಾರ, ಉತ್ತರ ಪ್ರದೇಶ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.