AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇನ್ನೆರಡು ದಿನ ತುಂತುರು ಮಳೆ; ಮಲೆನಾಡಿನಲ್ಲಿ ತಗ್ಗಿದ ವರುಣನ ಆರ್ಭಟ

Karnataka Weather Today: ಇಂದು ಕರ್ನಾಟಕ ಮಾತ್ರವಲ್ಲದೆ, ರಾಜಸ್ಥಾನ, ಗುಜರಾತ್ ಮತ್ತು ಕೊಂಕಣ ಕರಾವಳಿಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಬೀಳಬಹುದು.

Karnataka Rain: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇನ್ನೆರಡು ದಿನ ತುಂತುರು ಮಳೆ; ಮಲೆನಾಡಿನಲ್ಲಿ ತಗ್ಗಿದ ವರುಣನ ಆರ್ಭಟ
ಮಳೆ
TV9 Web
| Edited By: |

Updated on: Aug 16, 2022 | 5:50 AM

Share

ಬೆಂಗಳೂರು: ಕರ್ನಾಟಕದಲ್ಲಿ ಮಳೆರಾಯನ ಆರ್ಭಟಕ್ಕೆ (Heavy Rainfall) ಕೊಂಚ ಬ್ರೇಕ್ ಬಿದ್ದಿದ್ದರೂ ವರುಣನ ಅಬ್ಬರ ಪೂರ್ತಿಯಾಗಿ ಕಡಿಮೆಯಾಗಿಲ್ಲ. ಉತ್ತರ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ಮಳೆ ಇನ್ನೂ ಮುಂದುವರೆದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ (Krishna River) ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಘಟಪ್ರಭಾ (Ghataprabha) ನದಿ ಕೂಡ ಉಕ್ಕಿ ಹರಿಯುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲೂ ಮಳೆ ಮುಂದುವರೆದಿದೆ. ಕರ್ನಾಟಕದ (Karnataka Rains) ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಚಿಕ್ಕಮಗಳೂರಿನ ಭಾಗದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಅನಾಹುತಗಳು ಮಾತ್ರ ಕಡಿಮೆಯಾಗಿಲ್ಲ. ಬೆಟ್ಟ-ಗುಡ್ಡ ಕುಸಿಯುವುದು, ರಸ್ತೆ ಸಂಪರ್ಕ ಕಡಿತ, ತೋಟಗಳ ಮಣ್ಣು ಜರಿಯುವುದು ಇನ್ನೂ ನಿಂತಿಲ್ಲ. ಕಳೆದೊಂದು ವಾರದಿಂದ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಮಳೆ ಕಡಿಮೆಯಾಗಿದ್ದರೂ ಸುಮಾರು 20 ಮೀಟರ್ ಕಾಂಕ್ರೀಟ್ ರಸ್ತೆ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ಬಳಿ ನಡೆದಿದೆ. ಇದರಿಂದ ಈ ಮಾರ್ಗದಲ್ಲಿ ಸಂಚರಿಸಲು ಸಾಧ್ಯವಾಗದೆ ಪ್ರವಾಸಿಗರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ತಗ್ಗಿದ ಮಳೆಯ ಅಬ್ಬರ; ಈ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ

ಮಲೆನಾಡಿನಲ್ಲಿ ಮಳೆಯ ಅಬ್ಬರ ಬಹಳ ಕಡಿಮೆಯಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಮಳೆ ತಕ್ಕಮಟ್ಟಿಗೆ ನಿಯಂತ್ರಣಕ್ಕೆ ಬಂದಿದ್ದು, ನದಿಗಳ ನೀರಿನ ಒಳಹರಿವು ಇನ್ನೂ ಕಡಿಮೆಯಾಗಿಲ್ಲ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಕರ್ನಾಟಕ ಮಾತ್ರವಲ್ಲದೆ, ರಾಜಸ್ಥಾನ, ಗುಜರಾತ್ ಮತ್ತು ಕೊಂಕಣ ಕರಾವಳಿಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಬೀಳಬಹುದು. ಲಡಾಖ್​ನಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಬಹುದು. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಸಿಕ್ಕಿಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಧ್ಯಪ್ರದೇಶ, ಮಹಾರಾಷ್ಟ್ರ, ಗೋವಾ, ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆಯಿದೆ. ಇಂದು ರಾಜಸ್ಥಾನ, ಗುಜರಾತ್ ಮತ್ತು ಪಕ್ಕದ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್