Bangalore Rains: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕರ್ನಾಟಕದ (Karnataka Rain) ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುತ್ತಿದೆ. ಇಂದು ಕೂಡ ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇಂದು ಕೂಡ ಕರ್ನಾಟಕದ ಕೆಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Karnataka Rain: ಬೆಂಗಳೂರು, ಕೊಡಗು ಸೇರಿದಂತೆ ಹಲವೆಡೆ ಇಂದು ಕೂಡ ಸಾಧಾರಣ ಮಳೆ ಸಾಧ್ಯತೆ
ಇಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ. ಉಳಿದೆಡೆ ಇಂದು ತುಂತುರು ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Tamil Nadu Rain: ಕನ್ಯಾಕುಮಾರಿ ಸೇರಿ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಅಲ್ಲಲ್ಲಿ ಹಿಮಪಾತ ಅಥವಾ ಮಳೆ ಬೀಳಬಹುದು. ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಮೇಲೆ ಮಳೆಯನ್ನು ನಿರೀಕ್ಷಿಸಲಾಗಿದೆ. ಪಂಜಾಬ್‌ನಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ. ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದಲ್ಲಿ ದಟ್ಟವಾದ ಮಂಜು ಕವಿಯಲಿದೆ. ದೇಶದ ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನದ ಸಾಧ್ಯತೆಯಿದೆ.