Karnataka Rain: ಕರಾವಳಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಗಾಳಿ ಸಹಿತ ಮಳೆ

Karnataka Weather Today: ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನಾದ್ಯಂತ ಮಳೆಯಾಗುತ್ತಿದೆ. ಕಳೆದ ವಾರದ ಆರಂಭದಲ್ಲಿ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿತ್ತು.

Karnataka Rain: ಕರಾವಳಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಇಂದು ಗಾಳಿ ಸಹಿತ ಮಳೆ
ಕರ್ನಾಟಕದಲ್ಲಿ ಮಳೆ
Updated By: ಸುಷ್ಮಾ ಚಕ್ರೆ

Updated on: Mar 31, 2022 | 5:56 AM

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಮಲೆನಾಡು, ಕರಾವಳಿಯಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಮುಂದುವರೆದಿದೆ. ಕರ್ನಾಟಕದ ಕರಾವಳಿ ಮತ್ತು ಪಶ್ಚಿಮ ಭಾಗಗಳಲ್ಲಿ ಇಂದು ಮಳೆ (Rainfall) ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು (ಗುರುವಾರ) ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದು ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನಾದ್ಯಂತ ಮಳೆಯಾಗುತ್ತಿದೆ. ಕಳೆದ ವಾರದ ಆರಂಭದಲ್ಲಿ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿತ್ತು. ಅಲ್ಲದೆ, ಮಾರ್ಚ್ ಅಂತ್ಯದವರೆಗೆ ಕರ್ನಾಟಕದಲ್ಲಿ ಮಳೆ ಮತ್ತು ಭಾರೀ ಗಾಳಿಯ ಮುನ್ಸೂಚನೆ ನೀಡಲಾಗಿತ್ತು.

ಇಂದು ಭಾರತದ ಈಶಾನ್ಯ ಭಾಗದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಲಿದೆ. ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಬಿಸಿಗಾಳಿಯ ಪರಿಸ್ಥಿತಿಗಳು ಇರುತ್ತವೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ

Weather Alert: ಇನ್ನು ಐದು ದಿನ ದೇಶದ ಹಲವು ರಾಜ್ಯಗಳಲ್ಲಿ ಉಷ್ಣ ಅಲೆ, ಮಳೆಯೂ ಇರಲಿದೆ: ಹವಾಮಾನ ಇಲಾಖೆ