Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರ್ನಾಟಕದಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

Weather Forecast: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ತಮಿಳುನಾಡಿನ ಚೆನ್ನೈ, ಪುದುಚೇರಿಯಲ್ಲಿ ಮಳೆಯಾಗುತ್ತಿದೆ. ಇನ್ನೂ 2 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರ್ನಾಟಕದಲ್ಲಿ ಇನ್ನೆರಡು ದಿನ ಸಾಧಾರಣ ಮಳೆ
ಬೆಂಗಳೂರಿನಲ್ಲಿ ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 29, 2022 | 6:14 AM

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ (Karnataka Rains) ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕಳೆದ ವಾರದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು (Bengaluru Rain), ತಮಿಳುನಾಡಿನ ಚೆನ್ನೈ, ಪುದುಚೇರಿಯಲ್ಲಿ ಮಳೆಯಾಗುತ್ತಿದೆ. ಇನ್ನೂ 2 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.

ಕಳೆದೊಂದು ವಾರದಿಂದ ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿತ್ತು. ಮಳೆಯ ಜೊತೆ ಚಳಿಯೂ ಇತ್ತು. ಆದರೆ, ಗುರುವಾರದ ಬಳಿಕ ಮಳೆಯಾಗಿಲ್ಲ. ಚುಮು ಚುಮು ಚಳಿಯ ವಾತಾವರಣ ಮುಂದುವರೆದಿದೆ. ಮುಂಜಾನೆ ವೇಳೆ ಇಬ್ಬನಿಯೂ ಇದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 2 ದಿನಗಳ ಕಾಲ ಬೆಂಗಳೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಮಳೆಯ ಅಬ್ಬರ

ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ, ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಚಂಡಮಾರುತದ ಪರಿಚಲನೆ ಇದೆ ಎಂದು ಹೇಳಿದೆ. ಈಶಾನ್ಯ ಮಾನ್ಸೂನ್ ಮಾರುತವು ಮುಂದಿನ 4 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಮುಂದಿನ 4 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದು ದಕ್ಷಿಣ ಭಾರತದಲ್ಲಿ ಅದರಲ್ಲೂ ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ