ಬೆಂಗಳೂರು: ಕಳೆದ 20 ದಿನಗಳಿಂದ ಕರ್ನಾಟಕದಲ್ಲಿ ಮಳೆಯ (Karnataka Rains) ಅಬ್ಬರ ಕಡಿಮೆಯಾಗಿತ್ತು. ಆದರೆ, ಇದೀಗ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಹವಾಮಾನದಲ್ಲಿ ಉಂಟಾದ ಬದಲಾವಣೆಗಳಿಂದಾಗಿ ಕರ್ನಾಟಕದಲ್ಲಿ ಮಳೆ ಮತ್ತೆ ಅಬ್ಬರಿಸುತ್ತಿದೆ. ಇನ್ನೆರಡು ದಿನ ರಾಜ್ಯದ ಉತ್ತರ ಒಳನಾಡು ಸೇರಿದಂತೆ ವಿವಿಧೆಡೆ ಸಾಧಾರಣವಾಗಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಹಗುರ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇನ್ನೂ 2 ದಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಜೊತೆಗೆ ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಬಹುತೇಕ ಎಲ್ಲ ಕಡೆಗಳಲ್ಲಿ ಕಳೆದ 2 ವಾರದಿಂದ ಮಳೆ ಸಂಪೂರ್ಣವಾಗಿ ಕಡಿಮೆಯಾಗಿತ್ತು. ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ, ಚಳಿ ವಾತಾವರಣ ಕಂಡು ಬರುತ್ತಿದೆ. ಈ ಸುಳಿಗಾಳಿಯು ಒಡಿಶಾ ಕರಾವಳಿ ಮಾರ್ಗವಾಗಿ ಸಾಗಲಿದೆ. ಹೀಗಾಗಿ ಇಂದು ಕರ್ನಾಟಕದ ಹಲವೆಡೆ ಮಳೆಯಾಗಬಹುದು.
ಇದನ್ನೂ ಓದಿ: Bangalore Rain: ಮತ್ತೆ ರಾಜಧಾನಿಗೆ ಎಂಟ್ರಿ ಕೊಟ್ಟ ವರುಣ -ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಆಗಿದೆ. ಈ ಪ್ರದೇಶಗಳಲ್ಲಿ ಇಂದು ಕೂಡ ಮಳೆ ಆಗಲಿದೆ. ಆದರೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ. ಭಾಗದಲ್ಲಿ ಸಾಧಾರಣವಾಗಿ ಕೆಲವೊಮ್ಮೆ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸಹ ತುಂತುರು ಮಳೆಯಾಗಬಹುದು. ಬೆಳಗಾವಿ, ಹಾವೇರಿ, ಬಾಗಲಕೋಟೆ, ಹಾವೇರಿ, ಗದಗ, ಯಾದಗಿರಿ, ಕೊಪ್ಪಳದಲ್ಲೂ ಮಳೆಯಾಗಲಿದೆ.
ಇಂದಿನಿಂದ ಸೆಪ್ಟೆಂಬರ್ 29ರವರೆಗೆ ಕರ್ನಾಟಕದ ಬಹುತೇಕ ಕಡೆ ಮಳೆಯಾಗಲಿದ್ದು, ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Basmati Rice: ಮಳೆಯಿಂದಾಗಿ ಭತ್ತದ ಬೆಳೆಗೆ ಹಾನಿ; ಬಾಸುಮತಿ ಅಕ್ಕಿಯ ಬೆಲೆ ಮತ್ತಷ್ಟು ಹೆಚ್ಚಳ
ಇಂದು ಯಾವೆಲ್ಲ ರಾಜ್ಯಗಳಲ್ಲಿ ಮಳೆ?:
ತೆಲಂಗಾಣ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ಮಧ್ಯಪ್ರದೇಶ, ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.