AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರು, ಮಲೆನಾಡಿನಲ್ಲಿ ಇಂದು ಕೂಡ ಮಳೆ ಸಾಧ್ಯತೆ; ಉತ್ತರ ಕರ್ನಾಟಕದಲ್ಲಿ ತಗ್ಗಿದ ವರುಣನ ಅಬ್ಬರ

Bangalore Rains: ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಗುಡುಗುಸಹಿತ ಮಳೆಯಾಗುವ ನಿರೀಕ್ಷೆ ಇರುವುದರಿಂದ 'ಯೆಲ್ಲೋ ಅಲರ್ಟ್‌' ಘೋಷಿಸಲಾಗಿದೆ.

Karnataka Rain: ಬೆಂಗಳೂರು, ಮಲೆನಾಡಿನಲ್ಲಿ ಇಂದು ಕೂಡ ಮಳೆ ಸಾಧ್ಯತೆ; ಉತ್ತರ ಕರ್ನಾಟಕದಲ್ಲಿ ತಗ್ಗಿದ ವರುಣನ ಅಬ್ಬರ
ಮಳೆ
TV9 Web
| Edited By: |

Updated on: Oct 05, 2022 | 6:13 AM

Share

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಕರ್ನಾಟಕದಲ್ಲಿ ಮಳೆ (Karnataka Rain) ಮುಂದುವರೆಯಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದರೂ ಬೆಂಗಳೂರು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಗರಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದ್ದು, ಚಳಿಯ ವಾತಾವರಣ ಹೆಚ್ಚಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು ಕೂಡ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಗುಡುಗುಸಹಿತ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಹಾಗೇ, ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇಂದು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಅಂತ್ಯ, ಆದರೂ ಅ.15ರವರೆಗೆ ಮಳೆ ಅಬ್ಬರ ಸಾಧ್ಯತೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು (ಅಕ್ಟೋಬರ್ 5) ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಛತ್ತೀಸ್‌ಗಢದಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಉತ್ತರ ಪ್ರದೇಶದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡ, ಮಧ್ಯಪ್ರದೇಶ, ವಿದರ್ಭ, ಆಂಧ್ರ ಪ್ರದೇಶ, ಯಾನಂ ಮತ್ತು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗಲಿದೆ. ಬಿಹಾರ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಅಕ್ಟೋಬರ್ 6 ಮತ್ತು 7ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ