Karnataka Rain: ಬೆಂಗಳೂರು, ಮಲೆನಾಡಿನಲ್ಲಿ ಇಂದು ಕೂಡ ಮಳೆ ಸಾಧ್ಯತೆ; ಉತ್ತರ ಕರ್ನಾಟಕದಲ್ಲಿ ತಗ್ಗಿದ ವರುಣನ ಅಬ್ಬರ

| Updated By: ಸುಷ್ಮಾ ಚಕ್ರೆ

Updated on: Oct 05, 2022 | 6:13 AM

Bangalore Rains: ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಗುಡುಗುಸಹಿತ ಮಳೆಯಾಗುವ ನಿರೀಕ್ಷೆ ಇರುವುದರಿಂದ 'ಯೆಲ್ಲೋ ಅಲರ್ಟ್‌' ಘೋಷಿಸಲಾಗಿದೆ.

Karnataka Rain: ಬೆಂಗಳೂರು, ಮಲೆನಾಡಿನಲ್ಲಿ ಇಂದು ಕೂಡ ಮಳೆ ಸಾಧ್ಯತೆ; ಉತ್ತರ ಕರ್ನಾಟಕದಲ್ಲಿ ತಗ್ಗಿದ ವರುಣನ ಅಬ್ಬರ
ಮಳೆ
Follow us on

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಕರ್ನಾಟಕದಲ್ಲಿ ಮಳೆ (Karnataka Rain) ಮುಂದುವರೆಯಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದರೂ ಬೆಂಗಳೂರು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಗರಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದ್ದು, ಚಳಿಯ ವಾತಾವರಣ ಹೆಚ್ಚಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು ಕೂಡ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಗುಡುಗುಸಹಿತ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಹಾಗೇ, ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇಂದು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಅಂತ್ಯ, ಆದರೂ ಅ.15ರವರೆಗೆ ಮಳೆ ಅಬ್ಬರ ಸಾಧ್ಯತೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು (ಅಕ್ಟೋಬರ್ 5) ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಛತ್ತೀಸ್‌ಗಢದಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಉತ್ತರ ಪ್ರದೇಶದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡ, ಮಧ್ಯಪ್ರದೇಶ, ವಿದರ್ಭ, ಆಂಧ್ರ ಪ್ರದೇಶ, ಯಾನಂ ಮತ್ತು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗಲಿದೆ. ಬಿಹಾರ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಅಕ್ಟೋಬರ್ 6 ಮತ್ತು 7ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ