Karnataka Rain: ಬೆಂಗಳೂರಲ್ಲಿ ಮುಂದಿನ 2 ದಿನ, ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಜುಲೈ 19ರವರೆಗೆ ಭರ್ಜರಿ ಮಳೆಯಾಗುವ ಸಾಧ್ಯತೆ
Bengaluru Rain: ಹಾವೇರಿ, ಯಾದಗಿರಿ, ಕಲಬುರಗಿ, ಬೀದರ್, ಚಾಮರಾಜನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜುಲೈ 16 ಮತ್ತು 17ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ಜುಲೈ 15ರಿಂದ 19ರವರೆಗೆ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 2 ದಿನಗಳ ಕಾಲ ತುಂತುರು ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. (Karnataka and Bengaluru Rain)
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆಯಿದ್ದು ಜುಲೈ 15ರಿಂದ 18ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜತೆಗೆ ಹಾವೇರಿ, ಯಾದಗಿರಿ, ಕಲಬುರಗಿ, ಬೀದರ್, ಚಾಮರಾಜನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜುಲೈ 16 ಮತ್ತು 17ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Fairly widespread to widespread rainfall with isolated heavy to very heavy falls very likely over Konkan & Goa and Karnataka during next 2 days.
— India Meteorological Department (@Indiametdept) July 15, 2021
ರಾಜಧಾನಿಯಲ್ಲಿ ಮುಂದಿನ ಎರಡು ದಿನ ಹಲವು ಸಲ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮಡಿಕೇರಿ 15 ಶಿವಮೊಗ್ಗ ತಾಳಗುಪ್ಪದಲ್ಲಿ 14 ಸೆಂಮೀ ಕಾರವಾರದಲ್ಲಿ 13 ಸೆಂಮೀ ಮಳೆಯಾಗಿದೆ. ಪೂರ್ವ ಅರಬ್ಬೀ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದ್ದು, ಸರ್ಕೂಲೇಷನ್ ವಿದರ್ಭದಲ್ಲಿದ್ದು 4.5 ಕಿಮೀ ಎತ್ತರದಲ್ಲಿದೆ. ಸರ್ಕೂಲೇಷನ್ ಎತ್ತರಕ್ಕೆ ಹೋದಂತೆಲ್ಲ ನೈರುತ್ಯ ದಿಕ್ಕಿನೆಡೆಗೆ ವಾಲಿದೆ. ಇವುಗಳ ಪ್ರಭಾವದಿಂದ ಉತ್ತರ ಒಳನಾಡು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಜುಲೈ 15 ರಿಂದ 19 ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ:
KRS Dam: ಕಬಿನಿ ಜಲಾನಯನ ಪ್ರದೇಶದಲ್ಲಿ ಬಿರುಸುಗೊಂಡ ಮಳೆ, ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಎಷ್ಟಿದೆ ಈಗ?
(Karnataka Rain Monsoon 2021 Heavy rains likely in Bangalore over the next 2 days inland, coastal and southern inland or over July 19th)
Published On - 2:47 pm, Thu, 15 July 21