Karnataka Rain: ಇಂದಿನಿಂದ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಬೆಂಗಳೂರು, ಕರಾವಳಿ, ಮಲೆನಾಡಿಗೆ ಹಳದಿ ಅಲರ್ಟ್​

Monsoon 2022: ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ

Karnataka Rain: ಇಂದಿನಿಂದ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಬೆಂಗಳೂರು, ಕರಾವಳಿ, ಮಲೆನಾಡಿಗೆ ಹಳದಿ ಅಲರ್ಟ್​
ಮಳೆImage Credit source: Weather.com
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 03, 2022 | 5:48 AM

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು (Monsoon) ಮಳೆಯ ಅಬ್ಬರ ಶುರುವಾಗಿದೆ. ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ (Bangalore Rains) ಇಂದು ಮಳೆ ಹೆಚ್ಚಾಗುವುದರಿಂದ ಹಳದಿ ಅಲರ್ಟ್ (Yellow Alert)​ ಘೋಷಣೆ ಮಾಡಲಾಗಿದೆ. ಮುಂಗಾರು ಆಗಮನದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲೂ ಧಾರಾಕಾರ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ರಾಜ್ಯಾದ್ಯಂತ ಮಳೆಯ ಜೊತೆಗೆ ಗುಡುಗು, ಸಿಡಿಲು ಮಿಂಚಿನ ಎಚ್ಚರಿಕೆಯನ್ನೂ ನೀಡಲಾಗಿದೆ. ಮುಂದಿನ 4 ದಿನಗಳವರೆಗೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ.

ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಕರ್ನಾಟಕದ ಕೆಲವು ಭಾಗಗಳು, ಕೇರಳ, ತಮಿಳುನಾಡಿನ ಕೆಲವು ಭಾಗಗಳಲ್ಲಿ ಮಳೆ ಮುಂದುವರೆದಿದೆ.

ಇದನ್ನೂ ಓದಿ: Karnataka Rain: ಇಂದಿನಿಂದ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಶುರು; ನಾಳೆ ಮುಂಗಾರು ಪ್ರವೇಶ

ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಬಾಗಲಕೋಟೆ, ಬೀದರ್‌, ಗದಗ, ಕೊಪ್ಪಳ, ರಾಯಚೂರು ಜಿಲ್ಲೆ ಹೊರತು ಪಡಿಸಿ ಉಳಿದೆಡೆ ಮಳೆಯಾಗಲಿದೆ. ಇಂದಿನಿಂದ ಜೂನ್ 4ರವರೆಗೆ ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆಯಿದ್ದು,

ಇಂದಿನಿಂದ 4 ದಿನಗಳವರೆಗೆ ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಮತ್ತು ಮಿಂಚಿನ ಸಹಿತ ಸಾಧಾರಣ ಮಳೆಯಾಗಲಿದೆ. ಜೂನ್ 6ರವರೆಗೆ ಕರ್ನಾಟಕದಾದ್ಯಂತ ಸಾಕಷ್ಟು ವ್ಯಾಪಕವಾದ ಮಳೆಯಾಗಲಿದೆ. ಮುಂದಿನ ಸೋಮವಾರದವರೆಗೆ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದ ತುಂತುರು ಮಳೆಯಾಗಲಿದೆ. ಇಂದು ಕೇರಳ ಮತ್ತು ಮಾಹೆ, ತಮಿಳುನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸುರಿಯಲಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್