Karnataka Rain: ಇಂದಿನಿಂದ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಶುರು; ನಾಳೆ ಮುಂಗಾರು ಪ್ರವೇಶ

Monsoon 2022: ಜೂನ್ 2ರಿಂದ ಕರ್ನಾಟಕದಲ್ಲಿ ವರುಣನ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಇಂದಿನಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಲಿದೆ.

Karnataka Rain: ಇಂದಿನಿಂದ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಶುರು; ನಾಳೆ ಮುಂಗಾರು ಪ್ರವೇಶ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 01, 2022 | 5:54 AM

ಬೆಂಗಳೂರು: ಇನ್ನೆರಡು ದಿನಗಳಲ್ಲಿ ಕರ್ನಾಟಕಕ್ಕೆ ಮುಂಗಾರು (Monsoon) ಪ್ರವೇಶವಾಗುವ ಸಾಧ್ಯತೆಯಿದ್ದು, ಮಳೆಯ ಆರ್ಭಟ ಹೆಚ್ಚಾಗಲಿದೆ. ಜೂನ್ 2ಕ್ಕೆ ಕರ್ನಾಟಕಕ್ಕೂ ಮಾನ್ಸೂನ್ ಪ್ರವೇಶವಾಗಲಿದ್ದು, ಮಳೆಯ ಆರ್ಭಟ ಹೆಚ್ಚಾಗಲಿದೆ. ಜೂನ್ 2ರೊಳಗೆ ಕರ್ನಾಟಕದ (Karnataka Rains) ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಅಪ್ಪಳಿಸಲು ಸಿದ್ಧವಾಗಿದೆ. ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಇನ್ನೆರಡು ದಿನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ವರದಿಯ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ 7 ಮಿಮೀವರೆಗಿನ ಮಳೆ ಬೀಳಬಹುದು.

ಭಾರತೀಯ ಹವಾಮಾನ ಇಲಾಖೆಯಿಂದ (IMD) ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಜೂನ್ 2ರಿಂದ ಕರ್ನಾಟಕದಲ್ಲಿ ವರುಣನ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಇಂದಿನಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಲಿದೆ. ಜೂನ್ 2ರ ರಾತ್ರಿ ಅಥವಾ ಜೂನ್ 3ಕ್ಕೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು, ಬೆಂಗಳೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ ಮುಂಗಾರು ಪ್ರವೇಶವಾಗಲಿದೆ. ಜೂನ್ 2ರಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲೂ ಮಳೆ ಹೆಚ್ಚಾಗಲಿದೆ. ಜೂನ್ 2 ಮತ್ತು 3ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕರ್ನಾಟಕದಲ್ಲಿ ಒಣಹವೆ: ಇಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಧಾರವಾಡ, ರಾಯಚೂರು, ಯಾದಗಿರಿ, ಬೆಳಗಾವಿಯಲ್ಲಿ ಒಣ ಹವೆ ಮುಂದುವರೆಯಲಿದೆ. ಇಂದು ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಗಳಲ್ಲಿ ಒಣ ಹವೆ ಇರಲಿದೆ. ಇಂದು ಬೀದರ್​ನಲ್ಲಿ ಕೂಡ ಒಣ ಹವೆ ಇರಲಿದ್ದು, ರಾಜ್ಯದ ಉಳಿದ ಭಾಗದಲ್ಲಿ ಮಳೆಯಾಗಲಿದೆ. ಜೂನ್‌ 2ರಂದು ಬಾಗಲಕೋಟೆ, ಬೀದರ್‌, ಗದಗ, ಕೊಪ್ಪಳ, ರಾಯಚೂರು ಜಿಲ್ಲೆ ಹೊರತು ಪಡಿಸಿ ಉಳಿದೆಡೆ ಮಳೆಯಾಗುವ ಸಂಭವವಿದೆ.

ಇದನ್ನೂ ಓದಿ: Karnataka Rain: ಕರಾವಳಿ, ಮಲೆನಾಡಿನಲ್ಲಿ ಜೂನ್ 2ರಿಂದ ಮುಂಗಾರು ಮಳೆಯ ಅಬ್ಬರ; ಬೆಂಗಳೂರಿನಲ್ಲಿ ಹಳದಿ ಅಲರ್ಟ್​ ಘೋಷಣೆ

ಇಂದು ಬೆಂಗಳೂರಿನಲ್ಲಿ ಮಳೆಯೊಂದಿಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಜೂನ್ 3ರಿಂದ 4ರವರೆಗೆ ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆಯಿದ್ದು, ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್‌ನಷ್ಟಿರುತ್ತದೆ. ಬೆಂಗಳೂರಿನಲ್ಲಿ ಈ ತಿಂಗಳು ಭಾರೀ ಮಳೆಯಾಗಿದ್ದು, ಈ ತಿಂಗಳ ಆರಂಭದಲ್ಲಿ ವಾಯುವ್ಯ ಭಾರತವು ತೀವ್ರ ಶಾಖದ ಅಲೆಯಲ್ಲಿ ತತ್ತರಿಸಿದ್ದರೆ, ಅಸಾನಿ ಚಂಡಮಾರುತದ ಪ್ರಭಾವದಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಯಿತು. ಬೆಂಗಳೂರು 22 ವರ್ಷಗಳಲ್ಲಿ ಮೇ ತಿಂಗಳಲ್ಲಿ ಅತ್ಯಂತ ಚಳಿಯ ದಿನವನ್ನು ದಾಖಲಿಸಿದೆ.

ಮುಂದಿನ 3 ದಿನಗಳಲ್ಲಿ ಕೇರಳ, ಮಾಹೆ ಮತ್ತು ಲಕ್ಷದ್ವೀಪದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದ್ದು, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಜೂನ್ 3ರವರೆಗೆ ಅಸ್ಸಾಂ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅಸ್ಸಾಂ-ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 4 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಗಂಗಾನದಿ ಪಶ್ಚಿಮ ಬಂಗಾಳದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯ ಗಾಳಿಯೊಂದಿಗೆ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಇನ್ನೆರಡು ದಿನ ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ. ಮುಂದಿನ 2-3 ದಿನಗಳಲ್ಲಿ ಮಾನ್ಸೂನ್ ಈಶಾನ್ಯ ಭಾರತದ ಕೆಲವು ಭಾಗಗಳನ್ನು ಪ್ರವೇಶಿಸುತ್ತದೆ. 2022ರಲ್ಲಿ ಭಾರತದಲ್ಲಿ ಸಾಮಾನ್ಯ ಮಾನ್ಸೂನ್ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ (ಐಎಂಡಿ) ಸೂಚನೆ ನೀಡಿದೆ ಎಂದು ರಾಜ್ಯ ಹವಾಮಾನ ಕಚೇರಿ ಮಂಗಳವಾರ ತಿಳಿಸಿದೆ.

ಭಾರತ ಹವಾಮಾನ ಇಲಾಖೆಯ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಮಾತನಾಡಿ, ಈ ವರ್ಷ ಭಾರತದಲ್ಲಿ ದೀರ್ಘಾವಧಿಯ ಸರಾಸರಿ 103% ಮಳೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ. ಸೋಮವಾರ ಸಂಜೆ ಅಪ್ಪಳಿಸಿದ ಚಂಡಮಾರುತಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಸಂಪೂರ್ಣ ನಡುಗಿ ಹೋಗಿದೆ. ನಿನ್ನೆಯ ಬಿರುಗಾಳಿ ಹೊಡೆತಕ್ಕೆ ಜನರಲ್ಲಿ ಭೀತಿ ಹೆಚ್ಚಿದೆ. ಸೋಮವಾರ ಗಂಟೆಗೆ 100 ಕಿ.ಮೀ ವೇಗದಲ್ಲಿ ಗಾಳಿ ಬೀಸಿದ್ದು, ಕೆಲವೆಡೆ ಮರಗಳು ಧರೆಗುರುಳಿವೆ. ಜನ ಜೀವನ ಅಸ್ತವ್ಯಸ್ಥಗೊಂಡಿದ್ದು ಸಂಚಾರಕ್ಕೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಇಂದು ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿನ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರಕಾಶಿ, ರುದ್ರಪ್ರಯಾಗ, ಚಮೋಲಿ, ಬಾಗೇಶ್ವರ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇಂದು ಎಲ್ಲೆಲ್ಲಿ ಮಳೆ?: ಇಂದು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ ಮತ್ತು ಲಕ್ಷದ್ವೀಪದಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ತಮಿಳುನಾಡು ಮತ್ತು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆ ಅಥವಾ ಹಿಮದ ಸಾಧ್ಯತೆಯಿದೆ. ಗಂಗಾನದಿ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಬಿಹಾರ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಸಾಧಾರಣ ಮಳೆಯಾಗಲಿದೆ. ಮುಂದಿನ 4 ದಿನಗಳಲ್ಲಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದ ಮಳೆಯಾಗಲಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ