ಬೆಂಗಳೂರು: ಅಸಾನಿ ಚಂಡಮಾರುತದ ಅಬ್ಬರ ಕ್ಷೀಣಿಸಿದ್ದು, ಕರ್ನಾಟಕದಲ್ಲಿ ಇನ್ನೂ ಮಳೆ ಮುಂದುವರೆದಿದೆ. ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇಂದಿನಿಂದ ಮಂಗಳವಾರದವರೆಗೆ (ಮೇ 17) ಮಳೆಯಾಗಲಿದೆ. ಕಳೆದ 2 ವಾರಗಳಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ 2 ದಿನಗಳಿಂದ ಚಳಿಯ ವಾತಾವರಣ ಹೆಚ್ಚಾಗಿದೆ. ಇಂದು ಕೂಡ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು (Malnad Region) ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಇನ್ನೂ 4 ದಿನ ಚದುರಿದ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಬಿರಿಗಾಳಿಯೂ ಬೀಸಲಿದೆ. ಹಾಗೇ, ಈ ಬಾರಿ ಜೂನ್ ಮಧ್ಯದ ವೇಳೆಗೆ ಕರ್ನಾಟಕದಲ್ಲೂ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ.
ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಒಳನಾಡು ಮತ್ತು ಕರಾವಳಿಯಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಆಗಾಗ ಗುಡುಗು ಸಹಿತ ಮಳೆಯೂ ಸುರಿಯಲಿದೆ. ಬೆಂಗಳೂರಿನಲ್ಲಿ ಕಳೆದ 50 ವರ್ಷಗಳಲ್ಲಿ ಅತಿ ಹೆಚ್ಚು ತಂಪಾದ ತಾಪಮಾನವಿರುವ 2ನೇ ವರ್ಷ ಇದಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಿಸಿಲು ಹೆಚ್ಚಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.
ಸಾಮಾನ್ಯವಾಗಿ ಮಾನ್ಸೂನ್ ಜೂನ್ 1ರ ಸುಮಾರಿಗೆ ಕೇರಳಕ್ಕೆ ಮಾನ್ಸೂನ್ (ಮುಂಗಾರು) ಆಗಮಿಸುತ್ತದೆ. ಜೂನ್ ಮಧ್ಯದ ವೇಳೆಗೆ ಭಾರತದ ಉಳಿದ ಭಾಗಗಳನ್ನು ಆವರಿಸುತ್ತದೆ. ಆದರೆ, ಈ ಬಾರಿ ಮೇ 27ರಂದು ಕೇರಳಕ್ಕೆ ನೈಋತ್ಯ ಮುಂಗಾರಿನ ಪ್ರವೇಶವಾಗಲಿದೆ. ಈ ವರ್ಷ ಕೇರಳದಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆಯು ಸಾಮಾನ್ಯ ಆರಂಭದ ದಿನಾಂಕಕ್ಕಿಂತ ಮುಂಚೆಯೇ ಇರುತ್ತದೆ. ಮೇ 15ರ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಎಲ್ಲೆಲ್ಲಿ ಮಳೆ?:
ಕರ್ನಾಟಕವನ್ನು ಹೊರತುಪಡಿಸಿ ಮೇಘಾಲಯದ ಕೆಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯ ಮುನ್ಸೂಚನೆ ಇದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಗಂಗಾನದಿ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಬಿಹಾರ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಉತ್ತರ ಆಂತರಿಕ ಕರ್ನಾಟಕದ ಮೇಲೆ ಗುಡುಗು ಸಹಿತ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್‌ನ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 45 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಿರುತ್ತದೆ. ಉತ್ತರಾಖಂಡ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಬಿಹಾರದಲ್ಲಿ 40 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಿರುತ್ತದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲೂ ಮಳೆಯಾಗಲಿದೆ.
ಪಶ್ಚಿಮ ರಾಜಸ್ಥಾನ, ಪೂರ್ವ ರಾಜಸ್ಥಾನದ ಕೆಲವು ಭಾಗಗಳಲ್ಲಿ, ಜಮ್ಮು, ಮಧ್ಯಪ್ರದೇಶ, ವಿದರ್ಭ, ದಕ್ಷಿಣ ಪಂಜಾಬ್, ದಕ್ಷಿಣ ಹರಿಯಾಣ ಮತ್ತು ದೆಹಲಿಯಲ್ಲಿ ಶಾಖದ ಅಲೆಗಳು ಉಂಟಾಗುವ ಸಾಧ್ಯತೆಯಿದೆ. ಪೂರ್ವ ಮತ್ತು ಪಶ್ಚಿಮ ರಾಜಸ್ಥಾನದ ಹಲವು ಭಾಗಗಳಲ್ಲಿ ಭಾನುವಾರದವರೆಗೆ ಬಿಸಿಗಾಳಿ ಉಂಟಾಗುವ ಸಾಧ್ಯತೆಯಿದೆ
ಮಳೆಯ ಕುರಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ