Karnataka Rain: ಕರ್ನಾಟಕದಲ್ಲಿ ತಗ್ಗಿದ ವರುಣನ ಅಬ್ಬರ; ಇಂದಿನಿಂದ 3 ದಿನ ಸಾಧಾರಣ ಮಳೆ

Karnataka Weather Today : ಕರ್ನಾಟಕದಲ್ಲಿ 4 ತಿಂಗಳ ಮುಂಗಾರು ಸೆ. 30ಕ್ಕೆ ಅಂತ್ಯವಾಗಿದೆ. ಕರ್ನಾಟಕದಲ್ಲಿ ಈ ವರ್ಷ 852 ಮಿ.ಮೀ. ಮಳೆಯಾಗಬೇಕಿತ್ತು ಆದರೆ, 787 ಮಿ.ಮೀ. ಮಳೆ ದಾಖಲಾಗಿದೆ.

Karnataka Rain: ಕರ್ನಾಟಕದಲ್ಲಿ ತಗ್ಗಿದ ವರುಣನ ಅಬ್ಬರ; ಇಂದಿನಿಂದ 3 ದಿನ ಸಾಧಾರಣ ಮಳೆ
ಮಳೆ
Follow us
TV9 Web
| Updated By: Vinay Bhat

Updated on: Oct 02, 2021 | 6:44 AM

Karnataka Rain: ಕರ್ನಾಟಕದಲ್ಲಿ ಮುಂಗಾರು ಮುಕ್ತಾಯವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ. 8ರಷ್ಟು ಕಡಿಮೆ ಮಳೆಯಾಗಿದೆ. ಆದರೆ, ಶಾಹೀನ್ ಚಂಡಮಾರುತದ (Shaheen Cyclone) ಪರಿಣಾಮದಿಂದ ಇನ್ನೂ 3 ದಿನ ಅಂದರೆ ಅ. 4ರವರೆಗೆ ಕರ್ನಾಟಕದಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವುದರಿಂದ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಶುಕ್ರವಾರ ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ಭಾರೀ ಮಳೆಯಾಗಿದ್ದು, ಇಂದು ಕೂಡ ಮಳೆ ಮುಂದುವರೆಯುವ ನಿರೀಕ್ಷೆಯಿದೆ.

ಕರ್ನಾಟಕದಲ್ಲಿ 4 ತಿಂಗಳ ಮುಂಗಾರು ಸೆ. 30ಕ್ಕೆ ಅಂತ್ಯವಾಗಿದೆ. ಕರ್ನಾಟಕದಲ್ಲಿ ಈ ವರ್ಷ 852 ಮಿ.ಮೀ. ಮಳೆಯಾಗಬೇಕಿತ್ತು ಆದರೆ, 787 ಮಿ.ಮೀ. ಮಳೆ ದಾಖಲಾಗಿದೆ. ಕಲಬುರ್ಗಿಯಲ್ಲಿ ಭಾರೀ ಮಳೆಯಿಂದ ಅಪಾರ ಬೆಳೆಗಳು ನಾಶವಾಗಿವೆ. ಕರ್ನಾಟಕ, ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಜರಾತ್, ಬಿಹಾರ, ಅಸ್ಸಾಂ, ದೆಹಲಿ, ಮೇಘಾಲಯ, ಉತ್ತರ ಪ್ರದೇಶ, ಉತ್ತರಾಖಂಡ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಪಶ್ಚಿಮ ಬಂಗಾಳ, ಸಿಕ್ಕಿಂ, ಒರಿಸ್ಸಾ, ಬಿಹಾರ್, ಕೊಂಕಣ, ಕೇರಳ, ತೆಲಂಗಾಣ, ಛತ್ತೀಸ್​ಗಢ, ವಿದರ್ಭ, ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ಗೋವಾ, ಮಾಹೆ, ಲಕ್ಷದ್ವೀಪ, ಕರ್ನಾಟಕ, ರಾಯಲಸೀಮೆ, ಲಡಾಖ್, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಮಧ್ಯಪ್ರದೇಶದಲ್ಲಿ ಇಂದು ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾದ ಗುಲಾಬ್ ಚಂಡಮಾರುತವೇ ಅರಬ್ಬಿ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ಮರುರೂಪ ಪಡೆಯಲಿದೆ. ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ಹಾಗೂ ಗುಜರಾತ್ ಕರಾವಳಿ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ಇಂದು ಶಾಹೀನ್ ಚಂಡಮಾರುತ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದೆ. ಕೇರಳ, ತಮಿಳುನಾಡಿನಲ್ಲಿ ಕೂಡ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ.

ಶಾಹೀನ್ ಚಂಡಮಾರುತ ಭಾರತದ ಕರಾವಳಿ ತೀರಗಳಿಗೆ ಅಪ್ಪಳಿಸಿದರೂ ಅದರ ಪರಿಣಾಮ ಹೆಚ್ಚಾಗಿ ಇರುವುದಿಲ್ಲ. ಆದರೆ, ಪಾಕಿಸ್ತಾನ, ಇರಾನ್ ದೇಶಗಳಲ್ಲಿ ಈ ಚಂಡಮಾರುತ ತೀವ್ರ ಪರಿಣಾಮ ಉಂಟುಮಾಡಲಿದೆ. ಗುಜರಾತ್​ನಿಂದ ಪಾಕಿಸ್ತಾನ- ಮಕ್ರನ್ ಕರಾವಳಿ ತೀರದ ಕಡೆಗೆ ಶಾಹೀನ್ ಚಂಡಮಾರುತ ಚಲಿಸಲಿದೆ. ಇನ್ನು ಗುಜರಾತ್, ಮಹಾರಾಷ್ಟ್ರ, ಒರಿಸ್ಸಾ, ಕೇರಳ, ತಮಿಳುನಾಡು, ಕರ್ನಾಟಕದ ಕರಾವಳಿ ತೀರದಲ್ಲಿ ಶಾಹೀನ್ ಚಂಡಮಾರುತದ ಪರಿಣಾಮ ಕೊಂಚ ಮಟ್ಟಿಗೆ ಇರಲಿದೆ. ಇಂದಿನಿಂದ ಮಳೆಯ ಪ್ರಮಾಣ ತಗ್ಗಲಿದ್ದು, ಸಾಧಾರಣ ಮಳೆ ಇರಲಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಅ. 4ರವರೆಗೆ ವ್ಯಾಪಕ ಮಳೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Karnataka Rain: ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ