Karnataka Rain: ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರ; ಇನ್ನೂ 3 ದಿನ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಮಳೆ;

| Updated By: ಸುಷ್ಮಾ ಚಕ್ರೆ

Updated on: Jun 12, 2022 | 5:30 AM

Monsoon 2022: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆಯಾಗಲಿದೆ. ಇಂದು ದಕ್ಷಿಣ ಮಹಾರಾಷ್ಟ್ರ, ಉತ್ತರ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಮುಂಗಾರು ಪ್ರವೇಶಿಸಲಿದೆ.

Karnataka Rain: ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರ; ಇನ್ನೂ 3 ದಿನ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಮಳೆ;
ಮಳೆ
Image Credit source: Hindustan Times
Follow us on

Bangalore Rains: ಕರ್ನಾಟಕದಲ್ಲಿ ಕಳೆದ 10 ದಿನಗಳಿಂದ ಮುಂಗಾರು (Monsoon) ದುರ್ಬಲವಾಗಿತ್ತು. ಇದೀಗ ಮಳೆಯ ಅಬ್ಬರ ಹೆಚ್ಚಾಗುತ್ತಿರುವುದರಿಂದ ಕೃಷಿ ಚಟುವಟಿಕೆಯೂ ಚುರುಕುಗೊಂಡಿದೆ. ಬೆಂಗಳೂರಿನಲ್ಲಿ ಮಳೆ ಕಡಿಮೆಯಾಗಿ, ಮೋಡ ಮುಸುಕಿದ ವಾತಾವರಣವಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರವರೆಗೆ ಮಳೆ (Heavy Rainfall) ಹೆಚ್ಚಾಗಲಿದೆ. ಇಂದು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ.

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಇಂದಿನಿಂದ ಜೂನ್ 14ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಾರವಾರ, ತೀರ್ಥಹಳ್ಳಿ, ಸಾಗರ, ಕೊಪ್ಪ, ಭಟ್ಕಳ, ಅಂಕೋಲಾ, ಹೊನ್ನಾವರ, ಕುಮಟಾ, ಶಿರಸಿ ಮುಂತಾದ ಭಾಗಗಳಲ್ಲಿ ಮಳೆ ಚುರುಕಾಗಿದೆ.

ಇದನ್ನೂ ಓದಿ: Karnataka Rain: ಬೆಂಗಳೂರಿನಲ್ಲಿ ಇಂದು ತುಂತುರು ಮಳೆ; ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ವರುಣನ ಆರ್ಭಟ

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕೇರಳ, ಮಾಹೆ ಮತ್ತು ಲಕ್ಷದ್ವೀಪದಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ತೆಲಂಗಾಣದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ಮುಂದಿನ ಕೆಲವು ದಿನಗಳ ಕಾಲ ಈಶಾನ್ಯ ಭಾರತ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ಒಂದು ವಾರಕ್ಕೂ ಹೆಚ್ಚು ಕಾಲ ವಿರಾಮದ ನಂತರ, ನೈಋತ್ಯ ಮಾನ್ಸೂನ್ ಗೋವಾ ಮತ್ತು ಕೊಂಕಣ ಮತ್ತು ಕರ್ನಾಟಕದ ಭಾಗಗಳಲ್ಲಿ ಮಳೆ ಹೆಚ್ಚಾಗುತ್ತಿದೆ.

ಇಂದು ದಕ್ಷಿಣ ಮಹಾರಾಷ್ಟ್ರ, ಕರ್ನಾಟಕದ ಉತ್ತರ ಒಳನಾಡು, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಇಡೀ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ. ಇಂದು ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮೇಘಾಲಯ, ಅಸ್ಸಾಂ ಮತ್ತು ಗೋವಾದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮಹಾರಾಷ್ಟ್ರ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ತಕ್ಕಮಟ್ಟಿಗೆ ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುತ್ತದೆ, ಕೊಂಕಣ ಕರಾವಳಿಯಲ್ಲಿ ಸ್ಥಳೀಯವಾಗಿ ಭಾರೀ ಪ್ರಮಾಣದಲ್ಲಿ ಬೀಳುತ್ತದೆ.

ಇದನ್ನೂ ಓದಿ: Karnataka Rain: ಮಲೆನಾಡು, ಕರಾವಳಿಯಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ

ಇಂದು ತೆಲಂಗಾಣ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆಯಾಗಲಿದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಗುಜರಾತ್‌ನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 45 ಡಿಗ್ರಿ ಸೆಲ್ಸಿಯಸ್​​ ಅಥವಾ ಅದಕ್ಕಿಂತ ಹೆಚ್ಚಾಗಿರುತ್ತದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ