Karnataka Rain: ಮಲೆನಾಡು, ಕರಾವಳಿಯಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ

Bengaluru Rain: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಕರಾವಳಿಯ ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Karnataka Rain: ಮಲೆನಾಡು, ಕರಾವಳಿಯಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ
ಮಳೆ (ಸಂಗ್ರಹ ಚಿತ್ರ)
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 10, 2022 | 6:02 AM

Bangalore Rains: ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದಿನಿಂದ ಜೂನ್ 12ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವರುಣನ ಅಬ್ಬರ (Heavy Rainfall) ಹೆಚ್ಚಾಗಲಿದೆ. ಇಂದು ಬೆಂಗಳೂರು, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆಯಾಗಲಿದೆ.

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಕರಾವಳಿಯ ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಜೂನ್ 12ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರಿನಲ್ಲಿ ಅಪಾಯದ ಗ್ರಾಮಗಳು ಹಾಗೂ ಸ್ಥಳಗಳನ್ನು ಗುರುತು ಮಾಡಲಾಗಿದೆ. ಎನ್. ಆರ್. ಪುರದ 21, ಮೂಡಿಗೆರೆಯ 33, ಚಿಕ್ಕಮಗಳೂರಿನ 5, ಕೊಪ್ಪದ 6, ಶೃಂಗೇರಿಯ 9, ಕಡೂರಿನ 2, ತರೀಕೆರೆಯ 1 ಗ್ರಾಮವನ್ನು ಜಿಲ್ಲಾಡಳಿತ ಅಪಾಯದ ಗ್ರಾಮಗಳೆಂದು ಗುರುತಿಸಿದೆ. ಹಾಗೇ, ಎನ್. ಆರ್. ಪುರದ 17, ಮೂಡಿಗೆರೆಯ 24, ಶೃಂಗೇರಿಯ 7 ಹಾಗೂ ಚಿಕ್ಕಮಗಳೂರು-ಕೊಪ್ಪದ ತಲಾ 6 ಗ್ರಾಮಗಳನ್ನು ಸುರಕ್ಷಿತ ಪ್ರದೇಶವೆಂದು ಪಟ್ಟಿ ಮಾಡಲಾಗಿದೆ.

ಇದನ್ನೂ ಓದಿ: Karnataka Rain: ಬೆಂಗಳೂರಿನಲ್ಲಿ ಇಂದು ತುಂತುರು ಮಳೆ; ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ವರುಣನ ಆರ್ಭಟ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಮೇಘಾಲಯ ಮತ್ತು ಅಸ್ಸಾಂನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಲಕ್ಷದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿನ ಎತ್ತರದ ಪ್ರದೇಶಗಳಲ್ಲಿ ಹಿಮ ಸುರಿಯಬಹುದು. ಮಹಾರಾಷ್ಟ್ರ, ಗೋವಾ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ ಮತ್ತು ಗುಜರಾತ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಮಹಾರಾಷ್ಟ್ರದ ಸಂಪೂರ್ಣ ಪ್ರದೇಶಗಳಿಗೆ ಮಾನ್ಸೂನ್ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು