AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಕರಾವಳಿಯಲ್ಲಿ ಇಂದಿನಿಂದ 3 ದಿನ ವ್ಯಾಪಕ ಮಳೆ; ಚಿಕ್ಕಮಗಳೂರಿನಲ್ಲಿ ಹೈ ಅಲರ್ಟ್​ ಘೋಷಣೆ

Monsoon 2022: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಈ ವರ್ಷವೂ ಮುಂಗಾರಿನ ಅಬ್ಬರ ಹೆಚ್ಚಿರುವುದರಿಂದ ಚಿಕ್ಕಮಗಳೂರು ಜಿಲ್ಲಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.

Karnataka Rain: ಕರ್ನಾಟಕದ ಕರಾವಳಿಯಲ್ಲಿ ಇಂದಿನಿಂದ 3 ದಿನ ವ್ಯಾಪಕ ಮಳೆ; ಚಿಕ್ಕಮಗಳೂರಿನಲ್ಲಿ ಹೈ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಮಳೆImage Credit source: Manorama
TV9 Web
| Updated By: ಸುಷ್ಮಾ ಚಕ್ರೆ|

Updated on: Jun 09, 2022 | 5:58 AM

Share

Bangalore Rains: ಕರ್ನಾಟಕದ ಬಯಲುಸೀಮೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಇಂದಿನಿಂದ ಮಳೆಯ ಆರ್ಭಟ ಜೋರಾಗಲಿದೆ. ಇಂದಿನಿಂದ ಜೂನ್ 11ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಬೆಂಗಳೂರು, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ (ಜೂನ್ 9) 3 ದಿನಗಳವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿಯ ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಜೂನ್ 11ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ನಾಳೆಯಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರಿನಲ್ಲಿ ಹೈಅಲರ್ಟ್ ಘೋಷಣೆ: ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಪ್ರತಿ ವರ್ಷವೂ ಮಳೆಗಾಲದಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸುತ್ತವೆ. ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಮುಂಗಾರು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ಈ ಬಾರಿ 34 ತಂಡಗಳನ್ನೂ ನಿಯೋಜನೆ ಮಾಡಿದೆ. ಈ ವರ್ಷವೂ ಮುಂಗಾರಿನ ಅಬ್ಬರ ಹೆಚ್ಚಿರುತ್ತದೆ ಎಂಬ ಮಾಹಿತಿಯಿಂದ ಚಿಕ್ಕಮಗಳೂರು ಜಿಲ್ಲಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ
Image
Karnataka Rain: ಬೆಂಗಳೂರಿನಲ್ಲಿ ಇಂದು ತುಂತುರು ಮಳೆ; ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ವರುಣನ ಆರ್ಭಟ
Image
Karnataka Rain: ಇಂದಿನಿಂದ 3 ದಿನ ಮಲೆನಾಡು, ಕರಾವಳಿ, ಬೆಂಗಳೂರಿನಲ್ಲಿ ವ್ಯಾಪಕ ಮಳೆ; ಹಳದಿ ಅಲರ್ಟ್​ ಘೋಷಣೆ
Image
Karnataka Rain: ಕರ್ನಾಟಕದಲ್ಲಿ ಅಬ್ಬರಿಸಿದ ಮಳೆರಾಯ; ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಕರಾವಳಿಗೆ ಹಳದಿ ಅಲರ್ಟ್​
Image
Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ; ಬೆಂಗಳೂರು, ಕರಾವಳಿಯಲ್ಲಿ ಹೈ ಅಲರ್ಟ್

ಇದನ್ನೂ ಓದಿ: Karnataka Rain: ಇಂದಿನಿಂದ 3 ದಿನ ಮಲೆನಾಡು, ಕರಾವಳಿ, ಬೆಂಗಳೂರಿನಲ್ಲಿ ವ್ಯಾಪಕ ಮಳೆ; ಹಳದಿ ಅಲರ್ಟ್​ ಘೋಷಣೆ

ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರಿನಲ್ಲಿ ಅಪಾಯದ ಗ್ರಾಮಗಳು ಹಾಗೂ ಸ್ಥಳಗಳನ್ನು ಗುರುತು ಮಾಡಲಾಗಿದೆ. ಎನ್. ಆರ್. ಪುರದ 21, ಮೂಡಿಗೆರೆಯ 33, ಚಿಕ್ಕಮಗಳೂರಿನ 5, ಕೊಪ್ಪದ 6, ಶೃಂಗೇರಿಯ 9, ಕಡೂರಿನ 2, ತರೀಕೆರೆಯ 1 ಗ್ರಾಮವನ್ನು ಜಿಲ್ಲಾಡಳಿತ ಅಪಾಯದ ಗ್ರಾಮಗಳೆಂದು ಗುರುತಿಸಿದೆ. ಮಳೆ ಹೆಚ್ಚಾಗಿ ಯಾವುದೇ ರೀತಿಯ ತೊಂದರೆಯಾದರೂ ಅಧಿಕಾರಿಗಳು ಅಲ್ಲಿರಬೇಕೆಂದು ಜಿಲ್ಲಾಧಿಕಾರಿ ಕೆ. ಎನ್. ರಮೇಶ್‌ ಆದೇಶಿಸಿದ್ದಾರೆ. ಜಿಲ್ಲಾದ್ಯಂತ ಹೋಬಳಿವಾರು ತರಬೇತಿಯುಳ್ಳ 34 ತಂಡವನ್ನೂ ರಚಿಸಿದ್ದು, 290 ಹೋಂ ಗಾರ್ಡ್, 70 ಈಜು ತಜ್ಞರು ಹಾಗೂ 40 ಸ್ವಯಂ ಸೇವಕರನ್ನು ನಿಯೋಜಿಸಲಾಗಿದೆ.

ಹಾಗೇ, ಎನ್. ಆರ್. ಪುರದ 17, ಮೂಡಿಗೆರೆಯ 24, ಶೃಂಗೇರಿಯ 7 ಹಾಗೂ ಚಿಕ್ಕಮಗಳೂರು-ಕೊಪ್ಪದ ತಲಾ 6 ಗ್ರಾಮಗಳನ್ನು ಸುರಕ್ಷಿತ ಪ್ರದೇಶವೆಂದು ಪಟ್ಟಿ ಮಾಡಲಾಗಿದೆ/ ಚಾರ್ಮಾಡಿ ಘಾಟ್ ಸೇರಿದಂತೆ ಜಲಪಾತ ಹಾಗೂ ಅಪಾಯದ ಸ್ಥಳಗಳಲ್ಲಿ ಜನಸಾಮಾನ್ಯರು, ಪ್ರವಾಸಿಗರು ಮೋಜು-ಮಸ್ತಿ ಮಾಡಲು ಹೋಗಿ ಅಪಾಯಕ್ಕೆ ಸಿಲುಕಬಹುದು. ಅಂತಹ ಜಾಗದಲ್ಲಿ ಕಡ್ಡಾಯವಾಗಿ ನಾಮಫಲಕ ಹಾಕಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Karnataka Rain: ಬೆಂಗಳೂರಿನಲ್ಲಿ ಇಂದು ತುಂತುರು ಮಳೆ; ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ವರುಣನ ಆರ್ಭಟ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ರಾಯಲಸೀಮಾ ಮತ್ತು ಕರ್ನಾಟಕದಲ್ಲಿ ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಬಿಹಾರ, ಗೋವಾ, ಮಹಾರಾಷ್ಟ್ರ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆ ಅಥವಾ ಹಿಮದ ಮುನ್ಸೂಚನೆ ನೀಡಲಾಗಿದೆ. ಒಡಿಶಾ, ಜಾರ್ಖಂಡ್, ಪೂರ್ವ ರಾಜಸ್ಥಾನ, ಗುಜರಾತ್, ಮರಾಠವಾಡ, ವಿದರ್ಭ, ಛತ್ತೀಸ್‌ಗಢ ಮತ್ತು ತಮಿಳುನಾಡುಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ದಕ್ಷಿಣ ಹಿಮಾಚಲ ಪ್ರದೇಶ, ಜಮ್ಮು, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮರಾಠವಾಡ, ವಿದರ್ಭ, ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ ಬಿಸಿ ಗಾಳಿಯಿಂದ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್​​ಗಿಂತ ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?