Karnataka Rain: ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದ ಮುಂದಿನ 4 ದಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Rain: ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್​
ಮಳೆ
Follow us
ನಯನಾ ರಾಜೀವ್
|

Updated on: Apr 25, 2024 | 7:50 AM

ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಸಂಕೇಶ್ವರ, ನಾಪೊಕ್ಲು ಸೇರಿದಂತೆ ಹಲವೆಡೆ ಮಳೆಯಾಗಿದೆ. ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ತುಮಕೂರಿನಲ್ಲಿ ಉಷ್ಣಗಾಳಿ ಬೀಸಲಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಎಚ್​ಎಎಲ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.7  ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಉತ್ತರ ಒಳನಾಡು, ಕರಾವಳಿಯಲ್ಲಿ ಇಂದು ಮಳೆ ಸಾಧ್ಯತೆ

ಬೀದರ್​ನಲ್ಲಿ 36.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 22.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 38.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಂತಾಮಣಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ