Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರಿ ಮಳೆ, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಈ ಬಾರಿಯ ಮುಂಗಾರು ನಿಲ್ಲುವಂತೆ ಕಾಣುತ್ತಿಲ್ಲ, ಒಂದೆರಡು ದಿನ ಬಿಡುವು ಕೊಟ್ಟರೂ ಬಳಿಕ ಮತ್ತೆ ಶುರುವಾಗುತ್ತಿದೆ. ಅಕ್ಟೋಬರ್​ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಸೆಪ್ಟೆಂಬರ್ 27ರಿಂದ ಮಳೆ ಹೆಚ್ಚಾಗಲಿದೆ. ಬೆಳಗಾವಿ,ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರಿ ಮಳೆ, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆ
Image Credit source: PTI

Updated on: Sep 22, 2025 | 7:15 AM

ಬೆಂಗಳೂರು, ಸೆಪ್ಟೆಂಬರ್ 22: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರಿ ಮಳೆ(Rain)ಯಾಗುತ್ತಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಸೆಪ್ಟೆಂಬರ್ 27ರಿಂದ ಮಳೆ ಹೆಚ್ಚಾಗಲಿದೆ. ಬೆಳಗಾವಿ,ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ. ಒಟ್ಟಿನಲ್ಲಿ ಅಕ್ಟೋಬರ್​ವರೆಗೂ ಮಳೆ ಇರಲಿದೆ.

ಬೀದರ್, ಸೇಡಂ, ಕಲಬುರಗಿ, ಮಂಠಾಳ, ಮುದ್ದೇಬಿಹಾಳ, ಕುರ್ಡಿ, ಗುರುಮಿಟ್ಕಲ್, ಹುಮ್ನಾಬಾದ್, ಇಂಡಿ, ಕೆಂಭಾವಿ, ಮಸ್ಕಿ, ಶಾಹಪುರ, ಆಳಂದ, ಅಣ್ಣಿಗೆರೆ, ಭಾಲ್ಕಿ, ಕ್ಯಾಸಲ್​ರಾಕ್, ಚಿತ್ತಾಪುರ, ಗಾಣಗಾಪುರ, ಎಂಎಂ ಹಿಲ್ಸ್​, ಔರಾದ್, ಬೈಲಹೊಂಗಲ, ಭಾಗಮಂಡಲ, ಕದ್ರಾ, ಕುಮಟಾ, ನಾರಾಯಣಪುರ, ರಾಯಚೂರು, ಸೈದಾಪುರ, ಯಲ್ಲಾಪುರ, ಝಲ್ಕಿ ಕ್ರಾಸ್​​ನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಭಾನುವಾರ ಸಂಜೆ ಹಲವೆಡೆ ಸಾಧಾರಣ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿಸ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಸೆ 22 ರವರೆಗೆ ಕರ್ನಾಟಕದಲ್ಲಿ ಮಳೆ, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಗದಗದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us