Karnataka Weather: ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಏಪ್ರಿಲ್​ 15ರವರೆಗೆ ಮಳೆ ಸಾಧ್ಯತೆ

ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಏಪ್ರಿಲ್​ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಏಪ್ರಿಲ್​ 15ರವರೆಗೆ ಮಳೆ ಸಾಧ್ಯತೆ
ಮಳೆImage Credit source: iStock
Follow us
ನಯನಾ ರಾಜೀವ್
|

Updated on: Apr 10, 2024 | 7:30 AM

ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಏಪ್ರಿಲ್​ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಏಪ್ರಿಲ್​ 12ರಂದು ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.

ಮುಂದಿನ ಎರಡು ದಿನಗಳಲ್ಲಿ ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಬೆಮಗಳೂರು ನಗರ, ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಇಂದು ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ 9 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ, ಎಚ್​ಎಎಲ್​ನಲ್ಲಿ 36.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 40.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 39.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಾವಣಗೆರೆಯಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ