Karnataka Rain: ಮಂಗಳೂರಿನಲ್ಲಿ ವರುಣನ ಆರ್ಭಟ; ಕರಾವಳಿ, ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ

| Updated By: ಸುಷ್ಮಾ ಚಕ್ರೆ

Updated on: Jul 01, 2022 | 5:54 AM

Mangalore Rains: ಇಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ.

Karnataka Rain: ಮಂಗಳೂರಿನಲ್ಲಿ ವರುಣನ ಆರ್ಭಟ; ಕರಾವಳಿ, ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಮಳೆ
Image Credit source: India Today
Follow us on

Bangalore Rains: ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಇಂದಿನಿಂದ (ಜುಲೈ 1) 4 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಹೀಗಾಗಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ (Orange Alert)​ ಘೋಷಿಸಲಾಗಿದೆ. ಜುಲೈ 2ರಿಂದ 4ರವರೆಗೆ ಕರಾವಳಿಯಲ್ಲಿ ಹಳದಿ ಅಲರ್ಟ್​ (Yellow Alert) ನೀಡಲಾಗಿದೆ. ಮಳೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ಪ್ರದೇಶಗಳು ಜಲಾವೃತವಾಗಿವೆ.

ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಬೆಳಗಾವಿ, ಹಾವೇರಿ, ಧಾರವಾಡ ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗಲಿದೆ. ಇಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿಯಲ್ಲಿ ಅಲೆಗಳ ರಭಸ ಹೆಚ್ಚಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Karnataka Rain: ಬೆಂಗಳೂರಿನಲ್ಲಿ ಇಂದು ಭಾರೀ ಮಳೆ; ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲೂ ವರುಣನ ಆರ್ಭಟ

ಇಂದು ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಯಾದ್ಯಂತ ಮುಂಗಾರು ಮಳೆ ವೇಗ ಪಡೆದುಕೊಂಡಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಡೀ ದಿನ ಮಳೆಯಾಗುತ್ತಿದೆ. ಕರಾವಳಿ ಕರ್ನಾಟಕದಾದ್ಯಂತ ಭಾರೀ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಹಾಗೂ ಉಡುಪಿಯಲ್ಲೂ ಭಾರೀ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಿರಂತರ ಮಳೆಯಿಂದಾಗಿ ಮಂಗಳೂರು ನಗರದ ಹಲವು ರಸ್ತೆಗಳು ಜಲಾವೃತಗೊಂಡಿವೆ. ಮಂಗಳೂರು ಡಿಸಿ ಡಾ. ರಾಜೇಂದ್ರ ಪ್ರಕಾರ, ಕರಾವಳಿಯಲ್ಲಿ ಮಳೆಯ ಪರಿಸ್ಥಿತಿ ಗಂಭೀರವಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಇದನ್ನೂ ಓದಿ: Karnataka Rain: ಜುಲೈ 1ರಿಂದ ನಾಲ್ಕು ದಿನ ಕರ್ನಾಟಕಾದ್ಯಂತ ಅಧಿಕ ಮಳೆಯ ಮುನ್ಸೂಚನೆ

ಹವಾಮಾನ ಇಲಾಖೆಯು ಜುಲೈ 4ರವರೆಗೆ ರಾಜ್ಯಾದ್ಯಂತ ಹಳದಿ ಅಲರ್ಟ್ ಘೋಷಿಸಿದೆ. ಕರಾವಳಿಯಲ್ಲಿ ಗುಡುಗು ಸಿಡಿಲು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ., ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 30ರಿಂದ 40 ಕಿಲೋಮೀಟರ್ ತಲುಪುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಗಳೂರು ನಗರದಲ್ಲಿ ಬಹುತೇಕ ಕಡೆ ರಸ್ತೆಗಳಲ್ಲೆಲ್ಲಾ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ನಗರದಾದ್ಯಂತ ಸಂಚಾರ ದಟ್ಟಣೆ ಉಂಟಾಗಿದೆ. ಮಂಗಳೂರು ನಗರದ ಪಡೀಲು, ಪಂಪ್ ವೆಲ್, ಬೆಜೈ, ಅತ್ತಾವರ, ನೀರುಮಾರ್ಗಗಳಲ್ಲೆಲ್ಲಾ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ಕೊಂಕಣ ಮತ್ತು ಮಲಬಾರ್ ಕರಾವಳಿಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಪಶ್ಚಿಮ ಬಂಗಾಳ, ಗುಜರಾತ್, ಮಹಾರಾಷ್ಟ್ರ, ಗೋವಾ, ತೆಲಂಗಾಣ, ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ತಮಿಳು ನಾಡು, ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಲಡಾಖ್‌ನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.