Karnataka Rain: ಕರ್ನಾಟಕದಲ್ಲಿ ಆ. 2ರವರೆಗೂ ಭಾರೀ ಮಳೆ; ಈ 7 ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ

| Updated By: ಸುಷ್ಮಾ ಚಕ್ರೆ

Updated on: Jul 30, 2022 | 5:55 AM

Karnataka Weather Today: ಮಲೆನಾಡು ಮತ್ತು ಕರಾವಳಿಯ 7 ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲೂ ಮಳೆ ಹೆಚ್ಚಾಗುತ್ತಿದೆ.

Karnataka Rain: ಕರ್ನಾಟಕದಲ್ಲಿ ಆ. 2ರವರೆಗೂ ಭಾರೀ ಮಳೆ; ಈ 7 ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ
ಪ್ರಾತಿನಿಧಿಕ ಚಿತ್ರ
Image Credit source: Hindustan Times
Follow us on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ (Rainfall) ಹೆಚ್ಚಾಗಿದೆ. ಇಂದಿನಿಂದ ಆಗಸ್ಟ್​ 2ರವರೆಗೆ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ. ಹಾಗೇ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ. ಹೀಗಾಗಿ, ಮಲೆನಾಡು ಮತ್ತು ಕರಾವಳಿಯ 7 ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್​ (Orange Alert) ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲೂ ಮಳೆ ಹೆಚ್ಚಾಗುತ್ತಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಇಂದು ‘ಹಳದಿ ಅಲರ್ಟ್’ ಘೋಷಿಸಲಾಗಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Heavy Rain: ರಾತ್ರೋರಾತ್ರಿ ಸುರಿದ ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಮಳೆಗೆ ಜನರು ಹೈರಾಣು

ಕಲಬುರ್ಗಿ, ಬೀದರ್, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿದ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಕರಾವಳಿಯಲ್ಲಿ ಇನ್ನೂ 5 ದಿನ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಕರ್ನಾಟಕ ಮಾತ್ರವಲ್ಲದೆ ಉತ್ತರಾಖಂಡ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: Karnataka Rain: ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 5 ದಿನ ಜೋರು ಮಳೆ; ಉತ್ತರ ಒಳನಾಡಿನಲ್ಲಿ ಹಳದಿ ಅಲರ್ಟ್​

ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಜಾರ್ಖಂಡ್, ಗಂಗಾನದಿ ಪಶ್ಚಿಮ ಬಂಗಾಳದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಒಡಿಶಾ, ಕರಾವಳಿ ಆಂಧ್ರಪ್ರದೇಶ, ಯಾನಂ, ತೆಲಂಗಾಣ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ವರುಣನ ಆರ್ಭಟ ಜೋರಾಗಲಿದೆ.