Karnataka Rain: ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 5 ದಿನ ಜೋರು ಮಳೆ; ಉತ್ತರ ಒಳನಾಡಿನಲ್ಲಿ ಹಳದಿ ಅಲರ್ಟ್
Monsoon 2022: ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹಾಗೂ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದಿನಿಂದ ಆಗಸ್ಟ್ 2ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Bengaluru Rain: ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಳೆಯ (Rain in Karnataka) ಆರ್ಭಟ ಹೆಚ್ಚಾಗಿದೆ. ಇಂದಿನಿಂದ 5 ದಿನಗಳ ಕಾಲ ರಾಜ್ಯದ ಬೆಂಗಳೂರು, ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹಾಗೂ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದಿನಿಂದ ಆಗಸ್ಟ್ 2ರವರೆಗೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ.
ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಅತಿ ವ್ಯಾಪಕ ಮಳೆ ಸುರಿಯಲಿದೆ. ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ಕ್ಷೀಣಿಸಿದ್ದ ಮಳೆಯ ಅಬ್ಬರ ಇಂದು ಮತ್ತೆ ಹೆಚ್ಚಾಗಿದೆ. ಇಂದಿನಿಂದ ಇದೀಗ ಮತ್ತೆ ಮುಂದಿನ ಐದು ದಿನ (ಆಗಸ್ಟ್ 2ರವರೆಗೆ) ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಅತಿಯಾದ ಮಳೆ ಸುರಿಯಲಿದ್ದು, ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಭಾಗದಲ್ಲಿ ಇಂದು 11.5 ಸೆಂ.ಮೀ.ನಿಂದ 20 ಸೆಂ.ಮೀ.ನಷ್ಟು ಮಳೆ ಆಗಬಹುದು ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: Karnataka Rain: ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದುವರೆದ ಮಳೆ; ನಾಳೆಯಿಂದ ರಾಜ್ಯಾದ್ಯಂತ ವರುಣನ ಆರ್ಭಟ ಹೆಚ್ಚಳ
ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದ್ದು, ಇಂದಿನಿಂದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಇನ್ನೂ 5 ದಿನ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಜಿಲ್ಲೆಗಳಿಗೆ ಹಳದಿ ಅಲರ್ಟ್: ಕರ್ನಾಟಕದ ದಕ್ಷಿಣ- ಉತ್ತರ ಒಳನಾಡಿಗೂ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಇಂದು ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಬೆಂಗಳೂರಿನಲ್ಲೂ ಇಂದು ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕಲಬುರ್ಗಿ, ಬೀದರ್, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿದ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಹೆಚ್ಚುವರಿ ಪರಿಣಾಮ ಬೀರುತ್ತದೆ. ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಕೂಡ ಭಾರೀ ಮಳೆಯಾಗಲಿದೆ. ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉತ್ತರ ಪ್ರದೇಶ, ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪೂರ್ವ ಮಧ್ಯಪ್ರದೇಶ, ಕೊಂಕಣ, ಗೋವಾ, ಛತ್ತೀಸ್‌ಗಢ, ತೆಲಂಗಾಣ ಮತ್ತು ಕರ್ನಾಟಕದ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕವಾದ ಮಳೆಯನ್ನು ನಿರೀಕ್ಷಿಸಲಾಗಿದೆ.
ಒಡಿಶಾ, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್ ಪ್ರದೇಶ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ವಿದರ್ಭ, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ಇದೆ. ರಾಜಸ್ಥಾನ, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
Published On - 8:32 am, Fri, 29 July 22