Karnataka Rain: ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

| Updated By: ಸುಷ್ಮಾ ಚಕ್ರೆ

Updated on: Sep 10, 2022 | 5:55 AM

Karnataka Weather Today: ಕರ್ನಾಟಕದ 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಿದ್ದರೆ ಇನ್ನು ಕೆಲವು ಜಿಲ್ಲೆಗಳಿಗೆ ಇಂದಿನಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.

Karnataka Rain: ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ
ಮಳೆ
Follow us on

Bangalore Rains: ಕರ್ನಾಟಕದಲ್ಲಿ ಇನ್ನೂ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಕರ್ನಾಟಕದ 10 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಕರಾವಳಿ (Coastal Karnataka) ಮತ್ತು ಮಲೆನಾಡು, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಸೆ. 11ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ 3 ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು (Kodagu Rain), ಹಾಸನ, ಚಿಕ್ಕಮಗಳೂರು (Chikmagalur Rain) ಮತ್ತು ಶಿವಮೊಗ್ಗ (Shivamogga Rain), ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ‘ಆರೆಂಜ್ ಅಲರ್ಟ್‘ ಘೋಷಿಸಲಾಗಿದೆ.

ಕರ್ನಾಟಕದ 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಿದ್ದರೆ ಇನ್ನು ಕೆಲವು ಜಿಲ್ಲೆಗಳಿಗೆ ಇಂದಿನಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದಿನಿಂದ ಸೆ. 11ರವರೆಗೆ ‘ಹಳದಿ ಅಲರ್ಟ್’ ನೀಡಲಾಗಿದೆ.

ಇದನ್ನೂ ಓದಿ: Karnataka Rain: ನಿಲ್ಲದ ಮಳೆಯ ಅಬ್ಬರ; ಕರ್ನಾಟಕದ 10 ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು ನಗರದ ಉತ್ತರ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಿದ್ದರೆ, ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುತ್ತಿದೆ. ಈ ಮಳೆಯ ಆರ್ಭಟ ಇಂದಿನಿಂದ 2 ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಗೋವಾ, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಬಿಹಾರ, ಜಾರ್ಖಂಡ್, ಸಿಕ್ಕಿಂ, ಅರುಣಾಚಲ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ