Karnataka Rain: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ; ಕರಾವಳಿಗೆ ಆರೆಂಜ್ ಅಲರ್ಟ್, ಉತ್ತರ ಕರ್ನಾಟಕಕ್ಕೆ ಹಳದಿ ಅಲರ್ಟ್ ಘೋಷಣೆ
Karnataka Weather Today: ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಇನ್ನೆರಡು ದಿನ ಜಿಲ್ಲಾಡಳಿತ ಕರಾವಳಿಯ ಕಡಲತೀರಗಳಿಗೆ, ಜಲಪಾತಗಳಿಗೆ ತೆರಳದಂತೆ ಸೂಚಿಸಲಾಗಿದೆ.
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುತ್ತಿದ್ದು, ಮಲೆನಾಡಿನಲ್ಲೂ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಇಂದಿನಿಂದ 2 ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 26ರವರೆಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಹಾಗೇ, ಉತ್ತರ ಕರ್ನಾಟಕದ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಹುಬ್ಬಳ್ಳಿ, ಧಾರವಾಡದಲ್ಲಿ ಭಾನುವಾರದವರೆಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಕರ್ನಾಟಕದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಇನ್ನೆರಡು ದಿನ ಜಿಲ್ಲಾಡಳಿತ ಕರಾವಳಿಯ ಕಡಲತೀರಗಳಿಗೆ, ಜಲಪಾತಗಳಿಗೆ ತೆರಳದಂತೆ ಸೂಚಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.
ಕರಾವಳಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮತ್ತು ಹಿಮಾಲಯದ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಭಾರೀ ಗಾಳಿಯೊಂದಿಗೆ ಸಾಧಾರಣ ಮಳೆಯಾಗುತ್ತದೆ ಎನ್ನಲಾಗಿದೆ. ಈಶಾನ್ಯ ಭಾರತ, ಕೇರಳ, ಕರ್ನಾಟಕದ ಒಳಭಾಗ, ತಮಿಳುನಾಡಿನ ಕೆಲವು ಭಾಗಗಳು ಮತ್ತು ತೆಲಂಗಾಣದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು. ದೇಶದ ವಾಯುವ್ಯ ಭಾಗಗಳಾದ ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದ ಹೆಚ್ಚಿನ ಭಾಗಗಳು ಮುಂದಿನ ಎರಡು ದಿನಗಳವರೆಗೆ ಶುಷ್ಕ ವಾತಾವರಣವಿರುತ್ತದೆ.
ಇದನ್ನೂ ಓದಿ: Karnataka Rain: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಳದಿ ಅಲರ್ಟ್ ಘೋಷಣೆ; ಮಲೆನಾಡಿನಲ್ಲೂ ಭಾರೀ ಮಳೆ
ಇಂದು ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಸಾಂದರ್ಭಿಕ ಮಳೆಯ ಮುನ್ಸೂಚನೆ ಇದೆ. ಕರ್ನಾಟಕ, ಕೊಂಕಣ ಮತ್ತು ಗೋವಾ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮಧ್ಯ ಮಹಾರಾಷ್ಟ್ರ, ಮರಾಠವಾಡ, ಆಂಧ್ರಪ್ರದೇಶ, ಯಾನಂ, ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಮುಂದಿನ ದಿನಗಳಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ದಾಖಲಾಗಿದ್ದು, ಜೂನ್ 26ರ ತನಕ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆ ಅಬ್ಬರಿಸಲಿದೆ ಎಂದು ಹೇಳಿದೆ. ಈ ಮೂರು ಜಿಲ್ಲೆಗಳಿಗೆ 2 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ಮತ್ತು ಜೂ.26 ರಂದು ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ. ಹೀಗಾಗಿ, ಎರಡು ದಿನ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
ಇದನ್ನೂ ಓದಿ: Karnataka Rain: ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿ 10 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಪಶ್ಚಿಮ ಬಂಗಾಳ, ಸಿಕ್ಕಿಂ, ಕೊಂಕಣ ಮತ್ತು ಗೋವಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿದರ್ಭ, ಛತ್ತೀಸ್‌ಗಢ, ಬಿಹಾರ, ಒಡಿಶಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗುಜರಾತ್, ಮಧ್ಯ ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಆಂಧ್ರಪ್ರದೇಶದ ಕರಾವಳಿ, ಯಾನಂ, ಲಕ್ಷದ್ವೀಪಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಸ್ಸಾಂನಲ್ಲಿ ಮಳೆಯಿಂದ ಸಾವನ್ನಪ್ಪಿರುವವರ ಸಂಖ್ಯೆ 108ಕ್ಕೆ ಏರಿಕೆಯಾಗಿದೆ.