Karnataka Rain: ಬೆಂಗಳೂರು, ಕರಾವಳಿ, ಮಂಡ್ಯದಲ್ಲಿ 4 ದಿನ ಭಾರೀ ಮಳೆ; ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ

Bengaluru Rains: ಇಂದಿನಿಂದ ಜೂನ್ 22ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇಂದು ಮಲೆನಾಡು, ಕೊಡಗಿನಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rain: ಬೆಂಗಳೂರು, ಕರಾವಳಿ, ಮಂಡ್ಯದಲ್ಲಿ 4 ದಿನ ಭಾರೀ ಮಳೆ; ಮಲೆನಾಡಿನಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ
ಸಂಗ್ರಹ ಚಿತ್ರImage Credit source: the news minute
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 19, 2022 | 5:33 AM

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ (Karnataka Rains) ಆರ್ಭಟ ಹೆಚ್ಚಾಗುತ್ತಲೇ ಇದೆ. ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 22ರವರೆಗೆ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಇಂದು (ಭಾನುವಾರ) ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಭಾರೀ ಮಳೆಯಿಂದಾಗಿ ಆರೆಂಜ್ ಅಲರ್ಟ್​ (Orange Alert) ಘೋಷಿಸಲಾಗಿದೆ. ಜೂನ್ 23ರಿಂದ ಉತ್ತರ ಭಾರತಕ್ಕೆ ಮುಂಗಾರು (Monsoon) ಪ್ರವೇಶವಾಗಲಿದೆ.

ಇಂದಿನಿಂದ 4 ದಿನ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 22ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ
Image
Karnataka Rain: ಬೆಂಗಳೂರು, ಕರಾವಳಿ, ಕೊಡಗು, ಮಲೆನಾಡಿನಲ್ಲಿ ಭಾರೀ ಮಳೆಯಿಂದ ಹಳದಿ ಅಲರ್ಟ್​ ಘೋಷಣೆ
Image
Karnataka Rain: ಕರಾವಳಿಯಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ; ಮಲೆನಾಡಿನಲ್ಲಿ 4 ದಿನ ವರುಣನ ಆರ್ಭಟ
Image
Karnataka Rain: ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮುಂಗಾರು ಆರ್ಭಟ; ಬೆಂಗಳೂರಿನಲ್ಲಿ ಇಂದು ಚದುರಿದ ಮಳೆ
Image
Karnataka Rain: ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ; ಮಲೆನಾಡಿನಲ್ಲಿ ನಾಳೆಯಿಂದ ಭಾರೀ ಮಳೆ

ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮುಂಗಾರು ಚುರುಕುಗೊಳ್ಳಲಿದೆ. ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ಲಕ್ಷಣಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ನಿರೀಕ್ಷೆಯಿದೆ. ಜೂ.22ರವರೆಗೆ ಕರಾವಳಿ ಜಿಲ್ಲೆಗಳಿಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ 3 ದಿನ ‘ಹಳದಿ ಅಲರ್ಟ್’ ಮತ್ತು ಇಂದು ಹಾಗೂ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Bengaluru Rain: ಸುರಿವ ಮಳೆಯನ್ನೂ ಲೆಕ್ಕಿಸದೆ ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ; ವಿಡಿಯೋ ವೈರಲ್

ಮುಂದಿನ ವಾರದಿಂದ ಉತ್ತರ ಭಾರತಕ್ಕೆ ಮುಂಗಾರು ಪ್ರವೇಶವಾಗಲಿದೆ. ಜೂನ್ 22ರವರೆಗೆ ದೆಹಲಿ, ಚಂಡೀಗಢ, ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜೂನ್ 23ರಿಂದ ಉತ್ತರ ಭಾರತಕ್ಕೆ ಮುಂಗಾರು ಪ್ರವೇಶಿಸಲಿದೆ. ಅಸ್ಸಾಂ, ಮೇಘಾಲಯ ಮುಂತಾದ ಈಶಾನ್ಯ ರಾಜ್ಯಗಳಲ್ಲಿ ಈಗಾಗಲೇ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಮೇಘಾಲಯದ ಕೆಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಸ್ಸಾಂ, ಅರುಣಾಚಲ ಪ್ರದೇಶ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಬಿಹಾರ, ಮಧ್ಯಪ್ರದೇಶ, ಕೊಂಕಣ, ಗೋವಾ, ವಿದರ್ಭ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಹಿಮಾಚಲ ಪ್ರದೇಶ, ಕೊಂಕಣ, ಗೋವಾ, ಕರಾವಳಿ ಮತ್ತು ದಕ್ಷಿಣ ಆಂತರಿಕ ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಬೀಳುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಗುಡುಗು ಸಹಿತ ಹಿಮ ಬೀಳುವ ಸಾಧ್ಯತೆಯಿದೆ. ಬಿಹಾರ, ಉತ್ತರಾಖಂಡ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಪೂರ್ವ ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ವಿದರ್ಭ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ಪಶ್ಚಿಮ ಉತ್ತರ ಪ್ರದೇಶ, ಪಶ್ಚಿಮ ಮಧ್ಯಪ್ರದೇಶ, ಮರಾಠವಾಡ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ಇದೆ. ಪೂರ್ವ ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್ ಪ್ರದೇಶ, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ