Karnataka Rain: ಭಾರೀ ಮಳೆಯಿಂದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ

| Updated By: ಸುಷ್ಮಾ ಚಕ್ರೆ

Updated on: Aug 02, 2022 | 5:49 AM

Karnataka Weather Today: ಕರ್ನಾಟಕದಲ್ಲಿ ಇಂದು ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 3ಕ್ಕೆ ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ.

Karnataka Rain: ಭಾರೀ ಮಳೆಯಿಂದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಣೆ
ಮಳೆ.
Follow us on

Monsoon 2022: ಬೆಂಗಳೂರು: ಇಂದಿನಿಂದ 4 ದಿನಗಳ ಕಾಲ ಅಂದರೆ ಆಗಸ್ಟ್ 4ರವರೆಗೆ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ (ಆ. 2) ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಆಗಸ್ಟ್ 3ಕ್ಕೆ ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3 ಮತ್ತು 4ರಂದು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಆಗಸ್ಟ್ 4ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಆಗಸ್ಟ್ 4ರವರೆಗೆ ದಕ್ಷಿಣ ಭಾರತದ ವಿವಿಧೆಡೆ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ತೆಲಂಗಾಣ, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿಗಳಿಗೆ ಮಳೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮಳೆ ಮುಂದಿನ 4 ದಿನ ಮತ್ತಷ್ಟು ಚುರುಕುಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ 5 ದಿನ ಮುಂದುವರಿಯಲಿದೆ ಭಾರೀ ಮಳೆ; ಅಲರ್ಟ್​​ ಘೋಷಿಸಿದ ಹವಾಮಾನ ಇಲಾಖೆ

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆಗಸ್ಟ್ 3, 4ರಂದು ಮಳೆಯಾಗಲಿದೆ. ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4ರಂದು ಭಾರೀ ಮಳೆ ಬೀಳುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಬಳ್ಳಾರಿ, ಮಂಡ್ಯ, ರಾಮನಗರದಲ್ಲಿ ಇಂದಿನಿಂದ ಆಗಸ್ಟ್ 4ರವರೆಗೆ ಹಾಗೂ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆಗಸ್ಟ್ 4ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಕರ್ನಾಟಕದಲ್ಲಿ ಮಾತ್ರವಲ್ಲದೆ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಕೂಡ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 3 ಮತ್ತು 4 ರಂದು ತೆಲಂಗಾಣದಲ್ಲಿ ಗುಡುಗು ಮತ್ತು ಮಿಂಚಿನ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 2ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳದಲ್ಲಿ ಮಳೆಯಾಗಲಿದೆ.

ಇಂದು ಕೇರಳದ ಎಲ್ಲಾ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಇಡುಕ್ಕಿ, ಕೊಟ್ಟಾಯಂ, ಎರ್ನಾಕುಲಂನಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ ಇಂದು ಉತ್ತರಾಖಂಡದಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ಇದೆ. ಡೆಹ್ರಾಡೂನ್, ತೆಹ್ರಿ ಗರ್ವಾಲ್, ನೈನಿತಾಲ್ ಮತ್ತು ಚಂಪಾವತ್‌ಗೆ IMD ಆರೆಂಜ್ ಅಲರ್ಟ್ ನೀಡಿದೆ. ಮುಂದಿನ ಎರಡು ದಿನಗಳ ಕಾಲ ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ಹವಾಮಾನ ಇಲಾಖೆ ಮುನ್ಸೂಚನೆ: ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ‌ ಮಳೆಯಾಗುವ ಸಾಧ್ಯತೆ

ಇಂದು ಕೇರಳ, ಮಾಹೆಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.