ಬೆಂಗಳೂರು: ಕರ್ನಾಟಕದ ಬೆಂಗಳೂರು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯಲಿದೆ. ಇಂದಿನಿಂದ 2 ದಿನ ಕರ್ನಾಟಕ (Karnataka Rains), ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಮೇ 20ರಿಂದ ಮಳೆಯ ಪ್ರಮಾಣದಲ್ಲಿ ಇಳಿಕೆಯಾಗಲಿದ್ದು, ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ.
ನೈಋತ್ಯ ಅರೇಬಿನ್ ಸಮುದ್ರದಲ್ಲಿ ಚಂಡಮಾರುತ ಎದ್ದಿರುವ ಹಿನ್ನೆಲೆಯಲ್ಲಿ ಇಂದು ಕೂಡ ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ತಜ್ಞ, ಧಾರವಾಡ ಕೃಷಿ ವಿವಿ ಹವಾಮಾನ ವಿಭಾಗ ಮುಖ್ಯಸ್ಥ ಡಾ. ಆರ್.ಎಚ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಜೊತೆಗೆ ಬಿರುಸಿನ ಗಾಳಿ ಉಂಟಾಗುವ ಸಾಧ್ಯತೆಯಿದೆ. ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಮತ್ತು ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ತಿಳಿಸಿದೆ. ಈ ಬಗ್ಗೆ ಎಎನ್ಐ ಜೊತೆ ಮಾತನಾಡಿದ ಕರ್ನಾಟಕದ ಹವಾಮಾನ ಇಲಾಖೆಯ ಮುಖ್ಯಸ್ಥೆ ಗೀತಾ ಅಗ್ನಿಹೋತ್ರಿ, ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಮತ್ತು ನಂತರ 3ನೇ ದಿನದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುತ್ತದೆ. 4 ಮತ್ತು 5ನೇ ದಿನದಂದು ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದಿದ್ದಾರೆ.
ಇದನ್ನೂ ಓದಿ: Karnataka Rain: ಭಾರೀ ಮಳೆಯಿಂದ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ; ಇನ್ನೂ 3 ದಿನ ವರುಣನ ಆರ್ಭಟ
ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನಗಳವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ಕೇರಳ-ಮಾಹೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೇರಳ-ಮಾಹೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 20ರಿಂದ 22ರವರೆಗೆ ಸಾಕಷ್ಟು ವ್ಯಾಪಕ ಮಳೆಯಾಗುತ್ತದೆ.
ನೈಋತ್ಯ ಮುಂಗಾರು ಸಹಿತ ಗುಡುಗು ಸಹಿತ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ನೀರು ನಿಂತು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಬೆಂಗಳೂರಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ಬೆಂಗಳೂರಿನ ಗ್ರಾಮಾಂತರ ಮತ್ತು ನಗರಗಳ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಮಳೆಯಿಂದ ಮೃತಪಟ್ಟವರನ್ನು ಬಿಹಾರದ ದೇವಭಾರತ್ ಮತ್ತು ಉತ್ತರ ಪ್ರದೇಶದ ಅಂಕಿತ್ ಕುಮಾರ್ ಎಂದು ಗುರುತಿಸಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಮತ್ತು ಮನೆ ಹಾನಿಗೊಳಗಾದವರಿಗೆ 25,000 ರೂ. ಪರಿಹಾರ ಘೋಷಿಸಿದ್ದಾರೆ.
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯ ನಿರೀಕ್ಷೆಯಿದೆ. ಶುಕ್ರವಾರ ಸಾಕಷ್ಟು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಶನಿವಾರ ಮತ್ತು ಭಾನುವಾರ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಹೊರತಾಗಿ ದೇಶದ ವಿವಿಧ ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ಪ್ರದೇಶದಲ್ಲಿ ಮುಂದಿನ 3 ದಿನಗಳಲ್ಲಿ ಅಸ್ಸಾಂ, ಮೇಘಾಲಯ ಮತ್ತು ಸಿಕ್ಕಿಂನಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Rain Updates: ಅಸ್ಸಾಂನಲ್ಲಿ ಭಾರೀ ಮಳೆಯಿಂದ 8 ಜನ ಸಾವು; ದಕ್ಷಿಣ ಭಾರತದಲ್ಲಿ ರೆಡ್ ಅಲರ್ಟ್ ಘೋಷಣೆ
ಮುಂದಿನ ಎರಡು ದಿನಗಳಲ್ಲಿ ಕೇರಳ ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೇರಳ-ಮಾಹೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮುಂದಿನ 2 ದಿನ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು, ಮೇ 20ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೇರಳದ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ದಕ್ಷಿಣ ರಾಜ್ಯದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಇನ್ನು ಕೊಟ್ಟಾಯಂನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಉಕ್ಕಿ ಹರಿದಿದ್ದು, ವಿದ್ಯುತ್ ಕಂಬಗಳು ಧರೆಗುರುಳಿವೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ