Karnataka Rain: ಏಪ್ರಿಲ್ 5ರವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆ

|

Updated on: Apr 03, 2023 | 7:46 AM

ಕರ್ನಾಟಕದ ಹಲವೆಡೆ ಏಪ್ರಿಲ್ 5 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಏಪ್ರಿಲ್ 5ರವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆ
ಮಳೆ
Image Credit source: Hindustan Times
Follow us on

ಕರ್ನಾಟಕದ ಹಲವೆಡೆ ಏಪ್ರಿಲ್ 5 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಲಬುರಗಿಯಲ್ಲಿ 38.3 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 24.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2. ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರು, ಕೋಲಾರ, ಚಾಮರಾಜನಗರ ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಭಾರತದ ಹವಾಮಾನ ಇಲಾಖೆ (IMD) ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಇಂದು ಕನಿಷ್ಠ ತಾಪಮಾನ 15.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಋತುವಿನ ಸರಾಸರಿಗಿಂತ ಮೂರು ಡಿಗ್ರಿ ಕಡಿಮೆಯಾಗಿದೆ.

ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು (AQI) ಸುಮಾರು 8 ಗಂಟೆಗೆ ‘ತೃಪ್ತಿದಾಯಕ’ (77) ವಿಭಾಗದಲ್ಲಿ ದಾಖಲಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಅಂಕಿಅಂಶಗಳು ತೋರಿಸಿವೆ.

ಶೂನ್ಯ ಮತ್ತು 50 ರ ನಡುವಿನ AQI ಅನ್ನು ಉತ್ತಮ, 51 ಮತ್ತು 100 ತೃಪ್ತಿದಾಯಕ, 101 ಮತ್ತು 200 ಮಧ್ಯಮ, 201 ಮತ್ತು 300 ಕಳಪೆ, 301 ಮತ್ತು 400 ಅತ್ಯಂತ ಕಳಪೆ ಮತ್ತು 401 ಮತ್ತು 500 ತೀವ್ರ ಎಂದು ಪರಿಗಣಿಸಲಾಗುತ್ತದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ