AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕಲಬುರಗಿ, ಯಾದಗಿರಿ ಸೇರಿದಂತೆ ಹಲವೆಡೆ ಮಳೆ; ಸಿಡಿಲಿಗೆ ಇಬ್ಬರು ಬಲಿ

Karnataka Rain: ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ(Rain)ಯಾಗುತ್ತಿದ್ದು, ತಂಪಾದ ವಾತಾವರಣ ನಿರ್ಮಾಣವಾಗಿದೆ. ಅದರಂತೆ ಇಂದು ಕೆಲವೆಡೆ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಮೇ ತಿಂಗಳ ಕೊನೆ ವಾರದಲ್ಲಿ ಮುಂಗಾರು ಮಳೆ ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಎಂದು ಭಾರತ ಹವಾಮಾನ ಇಲಾಖೆ(IMD) ಸೂಚನೆ ನೀಡಿದೆ.

Karnataka Rain: ಕಲಬುರಗಿ, ಯಾದಗಿರಿ ಸೇರಿದಂತೆ ಹಲವೆಡೆ ಮಳೆ; ಸಿಡಿಲಿಗೆ ಇಬ್ಬರು ಬಲಿ
ಕಲಬುರಗಿ, ಯಾದಗಿರಿ, ಉಡುಪಿಯಲ್ಲಿ ಮಳೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: May 26, 2024 | 7:43 PM

Share

ಕಲಬುರಗಿ, ಮೇ.26: ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ(Rain)ಯಾಗುತ್ತಿದ್ದು, ತಂಪಾದ ವಾತಾವರಣ ನಿರ್ಮಾಣವಾಗಿದೆ. ಅದರಲ್ಲೂ ಇಂದು(ಮೇ.26) ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಮತ್ತು ರೆಡ್​ ಅಲರ್ಟ್​ ಘೋಷಿಸಲಾಗಿದೆ. ಅದರಂತೆ ಇಂದು ಕೆಲವೆಡೆ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಮೇ ತಿಂಗಳ ಕೊನೆ ವಾರದಲ್ಲಿ ಮುಂಗಾರು ಮಳೆ ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಎಂದು ಭಾರತ ಹವಾಮಾನ ಇಲಾಖೆ(IMD) ಸೂಚನೆ ನೀಡಿದೆ.

ಲಾಡ್ಲಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರ ಸಾವು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಏಕನಾಥ್ ವಾಘಮೂಡೆ(55) ಹಾಗೂ ಸತೀಶ್ ಶಳಕೆ(40) ಮೃತರು. ಇಬ್ಬರೂ ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ನಿವಾಸಿಗಳಾಗಿದ್ದು, ಮಳೆ ಬಂದ ಹಿನ್ನೆಲೆ ಮರದಡಿ ನಿಂತಿದ್ದಾಗ ಸಿಡಿಲು ಬಡಿದು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಮಳೆಯಿಂದ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ ದಂಪತಿ ಸಮಾಧಿ ಮುಳುಗಡೆ

ಯಾದಗಿರಿಯಲ್ಲಿ ಮಳೆಗೆ ಕರೆಯಂತಾದ ಬಡಾವಣೆ

ಯಾದಗಿರಿ: ಬಿರುಗಾಳಿ ಸಹಿತ ಬಾರಿ ಮಳೆ ಹಿನ್ನಲೆ ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿಯ ಬಡಾವಣೆ  ಕರೆಯಂತಾಗಿದೆ. ಮನೆಗಳ‌ ಸುತ್ತ ಮಳೆ ನೀರು ಆವರಿಸಿಕೊಂಡಿದ್ದು, ಮಳೆ‌ ನಿಂತ ಮೇಲೂ ಮನೆಯಿಂದ ಹೊರ ಬರಲಾಗದೆ ನಿವಾಸಿಗಳ ಪರದಾಟ ನಡೆಸಿದ್ದಾರೆ. ಸತತ ಮೂರು ಗಂಟೆಗಳ ಕಾಲ ಸುರಿದಿರುವ ಮಳೆಯಿಂದ ರಸ್ತೆ ಮೇಲೂ ಸಹ ನೀರು ಆವರಿಸಿಕೊಂಡಿದೆ. ಇದರಿಂದ  ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಇನ್ನು ವಿದ್ಯುತ್ ಕಂಬಗಳು, ಬೃಹತ್ ಮರಗಳು ಸಹ ನೆಲಕ್ಕುರಳಿದ್ದರಿಂದ ವಾಹನ ಸಂಚಾರಕ್ಕೂ ಅಡಚಣೆ‌ ಆಗಿದೆ.

ಬಿಸಿಲನಾಡು ಕೊಪ್ಪಳ, ಕರಾವಳಿ ಜಿಲ್ಲೆ ಉಡುಪಿಯಲ್ಲೂ ಮಳೆ

ಕೊಪ್ಪಳ: ಬಿಸಿಲನಾಡು ಕೊಪ್ಪಳವೂ ಇದೀಗ ಪುಲ್ ಕೂಲ್ ಕೂಲ್ ಆಗಿದೆ. ಮುಂಜಾನೆಯಿಂದ ಕೊಪ್ಪಳ ನಗರ ಸೇರಿ ಹಲವಡೆ ಭರ್ಜರಿ ಮಳೆಯಾಗಿದ್ದು, ಮುಂಜಾನೆಯೇ ಗುಡುಗು ಸಹಿತ ವರುಣನ ಆಗಮನವಾಗಿದೆ. ಮಳೆಯಿಂದ ಕೊಪ್ಪಳ ಜನತೆ ಸಂತಸಗೊಂಡಿದ್ದಾರೆ. ಇತ್ತ ಕರಾವಳಿ ಜಿಲ್ಲೆ ಉಡುಪಿಯಲ್ಲೂ ಗುಡುಗು ಸಹಿತ ಭಾರಿ ಮಳೆ ಆಗಿತ್ತಿದ್ದು, ಸಾಸ್ತಾನ, ಸಾಲಿಗ್ರಾಮ, ಕೋಟದ ಕೋಟೇಶ್ವರದಲ್ಲಿ ಮಳೆಯ ಅಬ್ಬರ ಶುರುವಾಗಿದೆ. ಮುಂದಿನ 2 ದಿನ ಉಡುಪಿ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ