Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದು ಚದುರಿದ ಮಳೆ; ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

Karnataka Weather Today: ಕರ್ನಾಟಕದ ಕರಾವಳಿಯಲ್ಲಿ ಇಂದು (ಶುಕ್ರವಾರ) ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಇಂದು ಕೇರಳಕ್ಕೆ ಮುಂಗಾರು ಆಗಮಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದು ಚದುರಿದ ಮಳೆ; ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 27, 2022 | 5:26 AM

ಬೆಂಗಳೂರು: ಕರ್ನಾಟಕ (Rain in Karnataka) ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ (Bengaluru Rains) ನಿನ್ನೆ ಪೀಣ್ಯ ದಾಸರಹಳ್ಳಿ, ಬಾಗಲಗುಂಟೆ, ಮಲ್ಲಸಂದ್ರ, ಹೆಸರಘಟ್ಟದಲ್ಲಿ ಮಳೆ ಸುರಿದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲೂ ಇಂದು ವರುಣನ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್‌ ಹೇಳಿದ್ದಾರೆ. ಇಂದು (ಮೇ 27) ಕೇರಳದಲ್ಲಿ ನೈಋತ್ಯ ಮಾನ್ಸೂನ್ (Monsoon 2022) ಪ್ರವೇಶವಾಗುವ ನಿರೀಕ್ಷೆಯಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿಯಲ್ಲಿ ಇಂದು (ಶುಕ್ರವಾರ) ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಮುಂಗಾರು ಇಂದು ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ಶನಿವಾರ ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ. ಮುಂದಿನ 2 ದಿನಗಳ ಕಾಲ ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯೊಂದಿಗೆ ಮಿಂಚು ಸಹಿತ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಕೇರಳದ ಪಥನಾಂತಿಟ್ಟ, ಅಲಪ್ಪುಳ, ಎರ್ನಾಕುಲಂ, ಕೊಟ್ಟಾಯಂ, ಇಡುಕ್ಕಿ, ಕೋಳಿಕೋಡ್ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಭಾರತ ಶಾಖದ ಅಲೆಯಿಂದ ತತ್ತರಿಸಿ ಹೋಗಿದ್ದು, ಮುಂದಿನ 4 ದಿನಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಖದ ಅಲೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದು ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮುಂದಿನ 2 ದಿನಗಳಲ್ಲಿ ಮತ್ತು ಮುಂದಿನ 4 ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ಕೊಡಗು, ಚಿಕ್ಕಮಗಳೂರಿನಲ್ಲಿ ಇಂದು ಮಳೆ ಸಾಧ್ಯತೆ

ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯು ಮುಂದಿನ 2 ದಿನಗಳವರೆಗೆ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮೇ 30ರವರೆಗೆ ಕೇರಳ ಮತ್ತು ಮಾಹೆಯಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮೇ 30ರವರೆಗೆ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದ ಮಳೆಯಾಗಲಿದೆ.

ಇಂದು ಕೇರಳ ಮತ್ತು ಲಕ್ಷದ್ವೀಪದಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ತಮಿಳುನಾಡು ಮತ್ತು ಕರ್ನಾಟಕದ ಕರಾವಳಿಯಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆ/ ಹಿಮ ಬೀಳುವ ಸಾಧ್ಯತೆಯಿದೆ.

ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಒಳಭಾಗದಲ್ಲಿ ಮಳೆಯ ಮುನ್ಸೂಚನೆ ಇದೆ. ಪಶ್ಚಿಮ ರಾಜಸ್ಥಾನದ ಸ್ಥಳಗಳಲ್ಲಿ ಬಿಸಿಗಾಳಿ ಪರಿಸ್ಥಿತಿಗಳು ಸಾಧ್ಯತೆಯಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ