Karnataka Rains: ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆ ಶುರು, ಯೆಲ್ಲೋ ಅಲರ್ಟ್​

ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದೆ, ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಮುಂದಿನ ಮೂರು ದಿನ ಮುಂಗಾರು ಚುರುಕಾಗಿರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮನಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆ ಶುರು, ಯೆಲ್ಲೋ ಅಲರ್ಟ್​
ಮಳೆ

Updated on: Aug 10, 2024 | 7:30 AM

ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಕರಾವಳಿಯಲ್ಲಿ ಆತಂಕವನ್ನು ಸೃಷ್ಟಿ ಮಾಡಿದೆ. ಇಂದಿನಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮನಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಕಿ, ಕೋಟ, ಕುಮಟಾ, ಮಂಗಳೂರು, ಧರ್ಮಸ್ಥಳ, ಉಡುಪಿ, ಪಣಂಬೂರು, ಕಾರ್ಕಳ, ಮಧುಗಿರಿ, ಅಂಕೋಲಾ, ಕಾರವಾರ, ಮುಲ್ಕಿ, ಭಾಲ್ಕಿ, ಗುತ್ತಲ್, ಕಕ್ಕೇರಿ, ಬಸವನಬಾಗೇವಾಡಿ, ಮಂಗಳೂರು, ಗೇರುಸೊಪ್ಪ, ಬೆಳ್ತಂಗಡಿ, ಗಂಗಾವತಿ, ಅಣ್ಣಿಗೆರೆ, ಗೇರುಸೊಪ್ಪ, ಶಿರಾಲಿ, ಹಾವೇರಿ, ಹುಣಸಗಿ, ಮಾಣಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಆಗಸ್ಟ್​ 13ರವರೆಗೆ ಭಾರಿ ಮಳೆ

ರಾಮನಗರ, ಬೆಂಗಳೂರು, ಕುಂದಾಪುರ, ಮುಂಡಗೋಡು, ಕೊಲ್ಲೂರು, ಬನವಾಸಿ, ಶೋರಾಪುರ, ಚಿತ್ತಾಪುರ, ಶಿರಹಟ್ಟಿ, ಗಂಗಾವತಿ, ರಾಣೆಬೆನ್ನೂರು, ಬೈಲಹೊಂಗಲ, ಚಿಕ್ಕಬಳ್ಳಾಪುರ, ಭಾಗಮಂಡಲ, ತೊಂಡೇಭಾವಿ, ಬರಗೂರು, ತಿಪಟೂರು, ಎನ್​ಆರ್​ಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬೆಳಗ್ಗೆಯಿಂದಲೂ ಮಳೆಯಾಗುತ್ತಿದೆ.ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆ, ಸಾಧಾರಣ ಮಳೆ

ಹೊನ್ನಾವರದಲ್ಲಿ 27.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಧಾರವಾಡದಲ್ಲಿ27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us