Karnataka Rains: ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವರುಣನ ಆರ್ಭಟ ಜೋರು

ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವರುಣನ ಆರ್ಭಟ ಜೋರಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ.

Karnataka Rains: ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವರುಣನ ಆರ್ಭಟ ಜೋರು
ಮಳೆ
Image Credit source: Business Today

Updated on: Jun 29, 2023 | 7:31 AM

ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವರುಣನ ಆರ್ಭಟ ಜೋರಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಕೂಡ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.

ಮುಲ್ಕಿ,ಕಾರವಾರ, ಪಣಂಬೂರು, ಮಂಗಳೂರು, ಮಂಕಿ, ಬೇಲಿಕೇರಿಯಲ್ಲಿ ಭಾರಿ ಮಳೆಯಾಗಿದೆ. ಗೋಕರ್ಣ, ಕುಂದಾಪುರ, ಹೊನ್ನಾವರ, ಶಿರಾಲಿ, ಕುಮಟಾ, ಮಾಣಿ, ಪುತ್ತೂರು, ಉಡುಪಿ, ಕಾರ್ಕಳ, ಕೋಟ, ಬೆಳ್ತಂಗಡಿ,ಕೊಲ್ಲೂರು, ಅಂಕೋಲಾ, ಗೇರುಸೊಪ್ಪ, ಸುಬ್ರಹ್ಮಣ್ಯದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ರಾಜ್ಯಾದ್ಯಂತ ಮುಂಗಾರು ದುರ್ಬಲ, ಜುಲೈ 2ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

ಧರ್ಮಸ್ಥಳ, ನಾಪೋಕ್ಲು, ಕ್ಯಾಸಲ್ ರಾಕ್,ಸಿದ್ದಾಪುರ, ಭಾಗಮಂಡಲ, ಕೊಟ್ಟಿಗೆಹಾರ, ಕದ್ರಾ, ವಿರಾಜಪೇಟೆ, ಕೊಟ್ಟಿಗೆಹಾರ, ಲಿಂಗನಮಕ್ಕಿ, ಯಲ್ಲಾಪುರ, ಜಾನ್ಮನೆ, ಶೃಂಗೇರಿ, ಕಮ್ಮರಡಿ, ತಾಳಗುಪ್ಪ, ಪೊನ್ನಂಪೇಟೆ, ಗೋಣಿಕೊಪ್ಪಲ್, ಮಧುಗಿರಿ, ಕಮಲಾಪುರ, ಕೊಪ್ಪ. ಕಡೂರು, ಜಯಪುರ, ಮೂಡಿಗೆರೆ, ತುಮಕೂರು, ತ್ಯಾಗರ್ತಿ, ಹುಂಚದಕಟ್ಟೆ, ಹುಣಸೂರಿನಲ್ಲಿ ಮಳೆಯಾಗಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸಸಲಿದೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಆಗಾಗ ಮಳೆಯಾಗಲಿದೆ.

ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:31 am, Thu, 29 June 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us