AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ರಾಜ್ಯಾದ್ಯಂತ ಚಳಿ, ದಕ್ಷಿಣ ಒಳನಾಡು, ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ರಾಜ್ಯಾದ್ಯಂತ ಚಳಿ ಜೋರಾಗುತ್ತಿದೆ, ಒಂದೆಡೆ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಧರ್ಮಸ್ಥಳ, ಬೆಳ್ತಂಗಡಿ, ಮಾಣಿ, ಪಣಂಬೂರು, ಮೂಡಿಗೆರೆ, ಮಂಗಳೂರು ವಿಮಾನ ನಿಲ್ದಾಣ, ಸಿದ್ದಾಪುರ, ಹರದನಹಳ್ಳಿ, ಕುಶಾಲನಗರದಲ್ಲಿ ಮಳೆಯಾಗಿದೆ.

Karnataka Weather: ರಾಜ್ಯಾದ್ಯಂತ ಚಳಿ, ದಕ್ಷಿಣ ಒಳನಾಡು, ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮಳೆ
ನಯನಾ ರಾಜೀವ್
|

Updated on:Dec 12, 2023 | 7:28 AM

Share

ರಾಜ್ಯಾದ್ಯಂತ ಚಳಿ ಜೋರಾಗುತ್ತಿದೆ, ಕೆಲವೆಡೆ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಧರ್ಮಸ್ಥಳ, ಬೆಳ್ತಂಗಡಿ, ಮಾಣಿ, ಪಣಂಬೂರು, ಮೂಡಿಗೆರೆ, ಮಂಗಳೂರು ವಿಮಾನ ನಿಲ್ದಾಣ, ಸಿದ್ದಾಪುರ, ಹರದನಹಳ್ಳಿ, ಕುಶಾಲನಗರದಲ್ಲಿ ಮಳೆಯಾಗಿದೆ.

ವಿಜಯಪುರ ಹಾಗೂ ಬೀದರ್​ನಲ್ಲಿ 14.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಬೆಳಗ್ಗೆ ಮಂಜು ಮುಸುಕಿರಲಿದೆ. ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ

ಉತ್ತರ ಒಳನಾಡಿನಲ್ಲಿ ಮಳೆ ಮುನ್ಸೂಚನೆ ಇಲ್ಲ. ಇಲ್ಲಿ ಅಧಿಕ ತಾಪಮಾನ ಉಂಟಾಗಲಿದ್ದು, ಶುಷ್ಕ ವಾತಾವರಣ ಮುಂದುವರಿಯಲಿದೆ. ಕೆಲವು ದಿನಗಳಲ್ಲಿ ಬೆಳಗ್ಗೆ ಮತ್ತು ತಡರಾತ್ರಿ ಚಳಿ ವಾತಾವರಣ ಇರಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಬೆಂಗಳೂರಿನಲ್ಲಿ ಇಂದಿನಿಂದ ಕೆಲವು ದಿನಗಳ ಕಾಲ ತಂಪು ಗಾಳಿ, ಆಗಾಗ ಮೋಡ ಕವಿದ ವಾತಾವರಣ ಉಂಟಾಗಲಿದೆ. ಉಳಿದಂತೆ ಇಲ್ಲಿ ಒಂದೆರಡು ಕಡೆ ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:27 am, Tue, 12 December 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!