Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಚುರುಕು, ಈ ಪ್ರದೇಶಗಳಲ್ಲಿ ಭಾರಿ ಮಳೆ
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮುಂಗಾರು ಮತ್ತೆ ಚುರುಕಾಗಲಿದ್ದು, ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮುಂಗಾರು ಮತ್ತೆ ಚುರುಕಾಗಲಿದ್ದು, ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕ್ಯಾಸಲ್ರಾಕ್, ಕೊಟ್ಟಿಗೆಹಾರ, ಕೊಲ್ಲೂರು, ಅಂಕೋಲ, ಕದ್ರಾ, ಸಿದ್ದಾಪುರ, ಬೇಲಿಕೇರಿ, ಲೋಂಡಾ, ಧರ್ಮಸ್ಥಳ, ಸಿದ್ದಾಪುರ, ಗೇರುಸೊಪ್ಪ, ಕುಮಟಾ, ಬನವಾಸಿ, ಮಂಚಿಕೇರಿ, ಜೋಯ್ಡಾ, ಶೃಂಗೇರಿ, ಕೊಪ್ಪ, ಮೂಡಿಗೆರೆ, ಸಕಲೇಶಪುರ, ಬೆಳಗಾವಿ ನಗರ, ಮಂಡಗದ್ದೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ.
ಮತ್ತಷ್ಟು ಓದಿ: Karnataka Rains: ಇಂದಿನಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರು, ಯೆಲ್ಲೋ ಅಲರ್ಟ್ ಘೋಷಣೆ
ಎಚ್ಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ