Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಚುರುಕು, ಈ ಪ್ರದೇಶಗಳಲ್ಲಿ ಭಾರಿ ಮಳೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮುಂಗಾರು ಮತ್ತೆ ಚುರುಕಾಗಲಿದ್ದು, ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಚುರುಕು, ಈ ಪ್ರದೇಶಗಳಲ್ಲಿ ಭಾರಿ ಮಳೆ
ಮಳೆ
Image Credit source: News 9

Updated on: Aug 04, 2023 | 7:26 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮುಂಗಾರು ಮತ್ತೆ ಚುರುಕಾಗಲಿದ್ದು, ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಕೊಟ್ಟಿಗೆಹಾರ, ಕೊಲ್ಲೂರು, ಅಂಕೋಲ, ಕದ್ರಾ, ಸಿದ್ದಾಪುರ, ಬೇಲಿಕೇರಿ, ಲೋಂಡಾ, ಧರ್ಮಸ್ಥಳ, ಸಿದ್ದಾಪುರ, ಗೇರುಸೊಪ್ಪ, ಕುಮಟಾ, ಬನವಾಸಿ, ಮಂಚಿಕೇರಿ, ಜೋಯ್ಡಾ, ಶೃಂಗೇರಿ, ಕೊಪ್ಪ, ಮೂಡಿಗೆರೆ, ಸಕಲೇಶಪುರ, ಬೆಳಗಾವಿ ನಗರ, ಮಂಡಗದ್ದೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ.

ಮತ್ತಷ್ಟು ಓದಿ: Karnataka Rains: ಇಂದಿನಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರು, ಯೆಲ್ಲೋ ಅಲರ್ಟ್​ ಘೋಷಣೆ

ಎಚ್​ಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us