AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ 2 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನವೆಂಬರ್ 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಕೂಡ ನವೆಂಬರ್ 24ರ ಬಳಿಕ ಮಳೆಯಾಗಲಿದೆ.

Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ 2 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆImage Credit source: Hindustan Times
ನಯನಾ ರಾಜೀವ್
|

Updated on:Nov 21, 2023 | 7:23 AM

Share

ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನವೆಂಬರ್ 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಕೂಡ ನವೆಂಬರ್ 24ರ ಬಳಿಕ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ನವೆಂಬರ್ 22 ರಿಂದ ಮಳೆಯಾಗಲಿದ್ದು, ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ವಿಜಯಪುರದಲ್ಲಿ 16.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ನವೆಂಬರ್ 21ರ ಬಳಿಕ ಮಳೆಯಾಗಲಿದೆ. ಉಪ್ಪಿನಂಗಡಿ, ಶೃಂಗೇರಿ, ಸಕಲೇಶಪುರದಲ್ಲಿ ಮಳೆಯಾಗಿದೆ.

ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ತಮಿಳುನಾಡು, ಕೇರಳ, ಆಂಧ್ರಪ್ರದೇಶದ ಕರಾವಳಿ ಭಾಗ , ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

ನವದೆಹಲಿಯ ಬಹುತೇಕ ಭಾಗಗಳಲ್ಲಿ ಮಂಜು ಮುಸುಕಿದ ವಾತಾವರಣ ಇದ್ದು, ಗರಿಷ್ಠ 28 ಮತ್ತು ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶನಿವಾರ ಗರಿಷ್ಠ 28.9 ಮತ್ತು ಕನಿಷ್ಠ 12.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:20 am, Mon, 20 November 23

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್