Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ 2 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನವೆಂಬರ್ 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಕೂಡ ನವೆಂಬರ್ 24ರ ಬಳಿಕ ಮಳೆಯಾಗಲಿದೆ.

Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ 2 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: Hindustan Times

Updated on: Nov 21, 2023 | 7:23 AM

ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನವೆಂಬರ್ 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಕೂಡ ನವೆಂಬರ್ 24ರ ಬಳಿಕ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ನವೆಂಬರ್ 22 ರಿಂದ ಮಳೆಯಾಗಲಿದ್ದು, ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ.
ವಿಜಯಪುರದಲ್ಲಿ 16.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ನವೆಂಬರ್ 21ರ ಬಳಿಕ ಮಳೆಯಾಗಲಿದೆ. ಉಪ್ಪಿನಂಗಡಿ, ಶೃಂಗೇರಿ, ಸಕಲೇಶಪುರದಲ್ಲಿ ಮಳೆಯಾಗಿದೆ.

ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ತಮಿಳುನಾಡು, ಕೇರಳ, ಆಂಧ್ರಪ್ರದೇಶದ ಕರಾವಳಿ ಭಾಗ , ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

ನವದೆಹಲಿಯ ಬಹುತೇಕ ಭಾಗಗಳಲ್ಲಿ ಮಂಜು ಮುಸುಕಿದ ವಾತಾವರಣ ಇದ್ದು, ಗರಿಷ್ಠ 28 ಮತ್ತು ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶನಿವಾರ ಗರಿಷ್ಠ 28.9 ಮತ್ತು ಕನಿಷ್ಠ 12.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:20 am, Mon, 20 November 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us