Karnataka Rain: ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ಮಲೆನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ;

Karnataka Rain: ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ಮಲೆನಾಡಿನಲ್ಲಿ ಇಂದು ಗುಡುಗು ಸಹಿತ ಮಳೆ;
ಕರ್ನಾಟಕದಲ್ಲಿ ಮಳೆ

Karnataka Weather Today: ಕರ್ನಾಟಕ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ.

TV9kannada Web Team

| Edited By: Sushma Chakre

Apr 26, 2022 | 5:48 AM

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಕೆಲವೆಡೆ ಮಳೆ (Rain in Karnataka) ಮುಂದುವರೆಯಲಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಕರ್ನಾಟಕದಲ್ಲಿ ಇಂದು ಚದುರಿದ ಮಳೆಯಾಗಲಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಸುಳ್ಯ, ಬೆಳ್ತಂಗಡಿ, ಪುತ್ತೂರಿನಲ್ಲಿ ಮಳೆಯಾಗಿದೆ. ಇಂದು ಕೂಡ ಕರಾವಳಿಯಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕರ್ನಾಟಕ ಮಾತ್ರವಲ್ಲದೆ ಏಪ್ರಿಲ್ 27ರಿಂದ ಈಶಾನ್ಯ ಭಾರತದಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಹವಾಮಾನ ಇಲಾಖೆಯು ಗುಜರಾತ್‌ನಲ್ಲಿ ಏಪ್ರಿಲ್ 27ರವರೆಗೆ ಬಿಸಿ ಅಲೆಯ ಎಚ್ಚರಿಕೆ ನೀಡಿದೆ. ಇಂದು ವಾಯುವ್ಯ ಮತ್ತು ಮಧ್ಯ ಭಾರತದ ಬಯಲು ಪ್ರದೇಶಗಳಲ್ಲಿ ಬಿಸಿ ಅಲೆ ಉಂಟಾಗಲಿದೆ. ಛತ್ತೀಸ್‌ಗಢದಲ್ಲಿ ಇಂದು ಗುಡುಗು, ಮಿಂಚು ಸಹಿತ ಚದುರಿದ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ವಿದರ್ಭ ಮತ್ತು ಪಶ್ಚಿಮ ಬಂಗಾಳದಲ್ಲಿ ಇದೇ ರೀತಿಯ ಪರಿಸ್ಥಿತಿಗಳು ಇರುತ್ತವೆ. ದಕ್ಷಿಣ ಮಧ್ಯ ಮಹಾರಾಷ್ಟ್ರದಲ್ಲಿ ಇಂದು ಕೂಡ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 3 ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್-ಮಣಿಪುರ-ಮಿಜೋರಾಂ-ತ್ರಿಪುರಾದಲ್ಲಿ ಲಘು ಮಳೆಯಾಗಲಿದೆ. ಮುಂದಿನ 3 ದಿನಗಳಲ್ಲಿ ಉಪ-ಹಿಮಾಲಯದ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಈ ಹವಾಮಾನ ಪರಿಸ್ಥಿತಿಗಳೊಂದಿಗೆ ಇಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಬಿಹಾರ, ಜಾರ್ಖಂಡ್, ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ ಕೂಡ ಏಪ್ರಿಲ್ 27ರವರೆಗೆ ಶಾಖದ ಅಲೆ ಉಂಟಾಗಲಿದೆ. ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಕರ್ನಾಟಕ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಒಡಿಶಾ, ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಹಿಮದ ವಾತಾವರಣ ಉಂಟಾಗಲಿದೆ. ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಬಿಸಿಗಾಳಿ ಹೆಚ್ಚಾಗಲಿದೆ.

ಮುಂದಿನ 4 ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗಲಿದೆ. ಏಪ್ರಿಲ್ 27-29ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಮಿಂಚು ಮತ್ತು ಬಿರುಗಾಳಿ, ಗುಡುಗು ಸಹಿತ ಮಳೆಯಾಗುತ್ತದೆ.

ಇದನ್ನೂ ಓದಿ: Karnataka Rain: ಕರಾವಳಿ, ಕೊಡಗು, ಹಾಸನ, ಉತ್ತರ ಕರ್ನಾಟಕದಲ್ಲಿ ಇಂದು ತುಂತುರು ಮಳೆ

Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆಯ ಆರ್ಭಟ; ಉತ್ತರ ಒಳನಾಡಿನಲ್ಲಿ ಹಳದಿ ಅಲರ್ಟ್​ ಘೋಷಣೆ

Follow us on

Related Stories

Most Read Stories

Click on your DTH Provider to Add TV9 Kannada