AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಬೆಂಗಳೂರಿನಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

Karnataka Rain: ಬೆಂಗಳೂರಿನಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ
ಮಳೆImage Credit source: The Economic Times
ನಯನಾ ರಾಜೀವ್
|

Updated on: Nov 30, 2023 | 7:24 AM

Share

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೀದರ್, ಲಕ್ಷ್ಮೇಶ್ವರ, ಭಾಲ್ಕಿ,ಚನ್ನಗಿರಿ, ಹೊನ್ನಾಳಿ, ತರೀಕೆರೆ, ಎನ್​ಆರ್​ಪುರ, ಯಡವಾಡ, ಸೇಡಬಾಳ್, ನಿಪ್ಪಾಣಿ, ಬಿಳಗಿ, ನರಗುಂದ, ಬಾದಾಮಿ, ಖಜೂರಿ, ಸಂಕೇಶ್ವರ, ಹಿಡಕಲ್ ಅಣೆಕಟ್ಟು, ಕುಂದಗೋಳ, ಇಂಡಿಮ ಕೂಡಲಸಂಗಮ, ಗುತ್ತಲ್, ಚಾಮರಾಜನಗರದಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕನಹಳ್ಳಿ,ದಾವಣಗೆರೆ,ಧಾರವಾಡದಲ್ಲಿ 18.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿತ್ತು, ಬುಧವಾರ ನಗರದ ಕೆಲವೆಡೆ ಮಳೆಯಾಗಿತ್ತು. ಇಂದು ಕೂಡ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಗಳಿವೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆ ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ