ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೀದರ್, ಲಕ್ಷ್ಮೇಶ್ವರ, ಭಾಲ್ಕಿ,ಚನ್ನಗಿರಿ, ಹೊನ್ನಾಳಿ, ತರೀಕೆರೆ, ಎನ್ಆರ್ಪುರ, ಯಡವಾಡ, ಸೇಡಬಾಳ್, ನಿಪ್ಪಾಣಿ, ಬಿಳಗಿ, ನರಗುಂದ, ಬಾದಾಮಿ, ಖಜೂರಿ, ಸಂಕೇಶ್ವರ, ಹಿಡಕಲ್ ಅಣೆಕಟ್ಟು, ಕುಂದಗೋಳ, ಇಂಡಿಮ ಕೂಡಲಸಂಗಮ, ಗುತ್ತಲ್, ಚಾಮರಾಜನಗರದಲ್ಲಿ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕನಹಳ್ಳಿ,ದಾವಣಗೆರೆ,ಧಾರವಾಡದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿತ್ತು, ಬುಧವಾರ ನಗರದ ಕೆಲವೆಡೆ ಮಳೆಯಾಗಿತ್ತು. ಇಂದು ಕೂಡ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಗಳಿವೆ.
ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆ
ಎಚ್ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ