AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಮೇ 30ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮೇ 30ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಮೇ 30ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆImage Credit source: Hindustan Times
ನಯನಾ ರಾಜೀವ್
|

Updated on: May 26, 2023 | 7:29 AM

Share

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮೇ 30ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣದೆರಡು ಕಡೆ ಮಳೆಯಾಗಲಿದ್ದು, ಬಹುತೇಕ ಕಡೆ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಿರಲಿದೆ.

ಮತ್ತಷ್ಟು ಓದಿ: Karnataka Rains: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ 4 ದಿನ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ

ನಾಪೋಕ್ಲು, ರಾಣೆಬೆನ್ನೂರು, ರಾಯಲಪಾಡು, ನಾಯಕನಹಟ್ಟಿ, ಸೇಡಂ, ಸರಗೂರು, ಚಿತ್ರದುರ್ಗ, ಮಂಗಳೂರು, ಮಂಗಳೂರು ವಿಮಾನ ನಿಲ್ದಾಣ, ಕುಮಟಾ, ನರಗುಂದ, ಕುಷ್ಟಗಿ, ತಾಳಿಕೋಟೆ, ಹೊಸಕೋಟೆ, ಚನ್ನಗಿರಿ, ಹಿಡಿಯೂರು, ಚಿಂತಾಮಣಿಯಲ್ಲಿ ಮಳೆಯಾಗಿದೆ. ರಾಯಚೂರಿನಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಸಾಧಾರಣ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್