Karnataka Rains: ಮೇ 30ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮೇ 30ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಮೇ 30ರವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆ
Image Credit source: Hindustan Times

Updated on: May 26, 2023 | 7:29 AM

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮೇ 30ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣದೆರಡು ಕಡೆ ಮಳೆಯಾಗಲಿದ್ದು, ಬಹುತೇಕ ಕಡೆ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಿರಲಿದೆ.

ಮತ್ತಷ್ಟು ಓದಿ: Karnataka Rains: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ 4 ದಿನ ಮಳೆ, ಉತ್ತರ ಒಳನಾಡಿನಲ್ಲಿ ಒಣಹವೆ

ನಾಪೋಕ್ಲು, ರಾಣೆಬೆನ್ನೂರು, ರಾಯಲಪಾಡು, ನಾಯಕನಹಟ್ಟಿ, ಸೇಡಂ, ಸರಗೂರು, ಚಿತ್ರದುರ್ಗ, ಮಂಗಳೂರು, ಮಂಗಳೂರು ವಿಮಾನ ನಿಲ್ದಾಣ, ಕುಮಟಾ, ನರಗುಂದ, ಕುಷ್ಟಗಿ, ತಾಳಿಕೋಟೆ, ಹೊಸಕೋಟೆ, ಚನ್ನಗಿರಿ, ಹಿಡಿಯೂರು, ಚಿಂತಾಮಣಿಯಲ್ಲಿ ಮಳೆಯಾಗಿದೆ. ರಾಯಚೂರಿನಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಸಾಧಾರಣ ಮಳೆಯಾಗಲಿದೆ.
ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us