Karnataka Rain: ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ 3 ದಿನ ಗುಡುಗು ಸಹಿತ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ
Bangalore Rains: ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
Bengaluru Rain: ಬೆಂಗಳೂರು ಸೇರಿದಂತೆ ಕರ್ನಾಟಕದ (Rain in Karnataka) ಹಲವು ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಭಾರೀ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು (Bangalore Rains) ಸೇರಿ ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ 2 ದಿನಗಳಿಂದ ಮಳೆ ಶುರುವಾಗಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 6ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಬೆಳಗ್ಗೆಯಿಂದಲೇ ಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಹೆಚ್ಚಾಗಿರುವುದರಿಂದ ಬೆಂಗಳೂರಿನಲ್ಲಿ ತಗ್ಗುಪ್ರದೇಶ, ರಾಜಕಾಲುವೆಯ ಅಕ್ಕಪಕ್ಕದಲ್ಲಿ ವಾಸ ಮಾಡುವವರು ಎಚ್ಚರದಿಂದಿರಲು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದಿನಿಂದ ನವೆಂಬರ್ 6ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Uttarakhand Snowfall: ಹಿಮಾಲಯದ ಸುತ್ತ ಭಾರೀ ಹಿಮಪಾತ; ಹಿಮದ ಮಳೆಗೆ ಸಿಕ್ಕ ಪ್ರವಾಸಿಗರು
ಇಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ 3 ದಿನಗಳವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕೇರಳ ಮತ್ತು ಮಾಹೆಯಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚೆನ್ನೈ ಸೇರಿದಂತೆ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚೆನ್ನೈ, ತಿರುವಳ್ಳುವೂರ್ ಸೇರಿದಂತೆ ಹಲವು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ದಾಖಲೆಯ ಮಳೆ ಸುರಿದು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕಳೆದ 75 ವರ್ಷಗಳಲ್ಲೇ ತಮಿಳುನಾಡಿನಲ್ಲಿ ದಾಖಲೆಯ ಮಳೆಯಾಗಿದೆ. ನವೆಂಬರ್ 5ರವರೆಗೆ ತಮಿಳುನಾಡಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.