AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಮಲೆನಾಡು, ಕರಾವಳಿಯಲ್ಲಿ ಇಂದು ಗುಡುಗು ಸಹಿತ ಮಳೆ; ಉತ್ತರ ಒಳನಾಡಿನಲ್ಲೂ ಹಗುರ ಮಳೆ ಸಾಧ್ಯತೆ

Bengaluru Weather Today: ಇಂದು ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

Karnataka Rain: ಮಲೆನಾಡು, ಕರಾವಳಿಯಲ್ಲಿ ಇಂದು ಗುಡುಗು ಸಹಿತ ಮಳೆ; ಉತ್ತರ ಒಳನಾಡಿನಲ್ಲೂ ಹಗುರ ಮಳೆ ಸಾಧ್ಯತೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 26, 2022 | 6:11 AM

Bengaluru Rains: ಕರ್ನಾಟಕದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ (Bangalore Rain) 3 ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ನವೆಂಬರ್ 28ರವರೆಗೆ ಮಳೆ ಮುಂದುವರೆಯಲಿದೆ. ಹಾಗೇ, ದಿನವಿಡೀ ಮೋಡ ಕವಿದ ವಾತಾವರಣವಿರಲಿದೆ. ಇಂದು (ಶನಿವಾರ) ಕರ್ನಾಟಕದ (Rain in Karnataka) 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ನವೆಂಬರ್ 28ರವರೆಗೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ. ಅದೇ ರೀತಿ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ

ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು, ಮಂಡ್ಯ, ಮಡಿಕೇರಿ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದೆ.

ನವೆಂಬರ್ 28ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಒಂದೆರಡು ಕಡೆಗೆ ತುಂತುರು ಇಲ್ಲವೇ ಹಗುರ ಮಳೆ ಸುರಿಯುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ತುಂತುರು ಮಳೆ ಬೀಳಬಹುದು ಎನ್ನಲಾಗಿದೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆ; ಚಳಿಯೂ ಹೆಚ್ಚಳ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ, ಕಾರೈಕಲ್, ಉತ್ತರ ಮತ್ತು ದಕ್ಷಿಣ ಆಂತರಿಕ ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಮಿಂಚು ಸಹಿತ ಮಳೆಯಾಗಲಿದೆ. ಇನ್ನುಳಿದ ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ನಿರೀಕ್ಷಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ