Bengaluru Rains: ಕರ್ನಾಟಕದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ (Bangalore Rain) 3 ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ನವೆಂಬರ್ 28ರವರೆಗೆ ಮಳೆ ಮುಂದುವರೆಯಲಿದೆ. ಹಾಗೇ, ದಿನವಿಡೀ ಮೋಡ ಕವಿದ ವಾತಾವರಣವಿರಲಿದೆ. ಇಂದು (ಶನಿವಾರ) ಕರ್ನಾಟಕದ (Rain in Karnataka) 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ನವೆಂಬರ್ 28ರವರೆಗೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ. ಅದೇ ರೀತಿ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ
ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು, ಮಂಡ್ಯ, ಮಡಿಕೇರಿ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದೆ.
ನವೆಂಬರ್ 28ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಒಂದೆರಡು ಕಡೆಗೆ ತುಂತುರು ಇಲ್ಲವೇ ಹಗುರ ಮಳೆ ಸುರಿಯುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ತುಂತುರು ಮಳೆ ಬೀಳಬಹುದು ಎನ್ನಲಾಗಿದೆ.
ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆ; ಚಳಿಯೂ ಹೆಚ್ಚಳ
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ, ಕಾರೈಕಲ್, ಉತ್ತರ ಮತ್ತು ದಕ್ಷಿಣ ಆಂತರಿಕ ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಮಿಂಚು ಸಹಿತ ಮಳೆಯಾಗಲಿದೆ. ಇನ್ನುಳಿದ ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ನಿರೀಕ್ಷಿಸಲಾಗಿದೆ.