Karnataka Rain: ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿ 10 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

| Updated By: ಸುಷ್ಮಾ ಚಕ್ರೆ

Updated on: Jun 23, 2022 | 5:52 AM

Monsoon 2022: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

Karnataka Rain: ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿ 10 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಮಳೆ
Follow us on

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ (Karnataka Rains) ಆರ್ಭಟ ಜೋರಾಗಿದ್ದು, ಕರಾವಳಿ, ಮಲೆನಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಇಂದಿನಿಂದ 3 ದಿನ ರೆಡ್ ಅಲರ್ಟ್​ (Red Alert) ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಈಗಾಗಲೇ ಜಿಲ್ಲಾಡಳಿತ ಕರಾವಳಿಯ ಕಡಲತೀರಗಳಿಗೆ, ಜಲಪಾತಗಳಿಗೆ ಭೇಟಿ ನೀಡದಂತೆ ಸೂಚಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಮಳೆ ಹೆಚ್ಚಾಗಿದ್ದು, ಸಂಜೆಯ ಬಳಿಕ ದಿನವೂ ಮಳೆ ಸುರಿಯುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಅಬ್ಬರದ ಹಿನ್ನೆಲೆಯಲ್ಲಿ ಇಂದಿನಿಂದ ಜೂನ್ 25ರವರೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆ ಉತ್ತರ ಕನ್ನಡದಲ್ಲಿ ವರುಣನ ಆರ್ಭಟ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ದಾಂಡೇಲಿ, ಕುಮಟಾ, ಹೊನ್ನಾವರ, ಶಿರಸಿ, ಸಿದ್ಧಾಪುರ, ಭಟ್ಕಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಶಿವಮೊಗ್ಗದ ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲೂ ಮಳೆ ಹೆಚ್ಚಾಗಿದೆ. ಚಿಕ್ಕಮಗಳೂರಿನ ಬಾಳೆಹೊನ್ನೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ ಮುಂತಾದೆಡೆಯೂ ಮಳೆ ಜಾಸ್ತಿಯಾಗುತ್ತಿದೆ. ಕರ್ನಾಟಕದ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ.ತಲುಪುವ ಸಾಧ್ಯತೆಯಿದ್ದು, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನ ವಿಜಯಪುರ, ಬೀದರ್‌, ಬೆಳಗಾವಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೂಡ ಮುಂದಿನ 3 ದಿನ ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ, ಈ ಜಿಲ್ಲೆಗಳಿಗೂ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ಇಂದು ಮತ್ತು ಶುಕ್ರವಾರ ‘ರೆಡ್ ಅಲರ್ಟ್‌’ ನೀಡಿ ಜಿಲ್ಲಾಡಳಿತಗಳಿಗೆ ಎಚ್ಚರಿಸಲಾಗಿದೆ.

ಇದನ್ನೂ ಓದಿ
Viral Video: ಮಗುವನ್ನು ಬುಟ್ಟಿಯಲ್ಲಿಟ್ಟುಕೊಂಡು ಪ್ರವಾಹ ದಾಟಿದ ತಂದೆ; ವಿಡಿಯೋ ನೋಡಿ ಕಣ್ತುಂಬಿಕೊಂಡ ನೆಟ್ಟಿಗರು
Assam Flood: ಭೀಕರ ಪ್ರವಾಹದಿಂದ ದ್ವೀಪವಾಗಿದೆ ಅಸ್ಸಾಂ; ಮಳೆಯ ಹೊಡೆತಕ್ಕೆ 81 ಜನ ಸಾವು
Karnataka Rain: ಕರ್ನಾಟಕದಲ್ಲಿ ನಿಲ್ಲದ ಮಳೆಯ ಅಬ್ಬರ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹಳದಿ ಅಲರ್ಟ್​ ಘೋಷಣೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?:

ಇಂದು ಕೊಂಕಣ, ಗೋವಾ ಮತ್ತು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಆಂಧ್ರಪ್ರದೇಶ, ಯಾನಂ, ತೆಲಂಗಾಣ, ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಇರುತ್ತದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ