AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದಲ್ಲಿ ಇಂದಿನಿಂದ ಸೆ. 11ರವರೆಗೆ ಭಾರೀ ಮಳೆ; ಕರಾವಳಿಗೆ ರೆಡ್ ಅಲರ್ಟ್​ ಘೋಷಣೆ

Karnataka Weather Today: ಕರಾವಳಿಯ ಮೂರು ಜಿಲ್ಲೆಗಳಿಗೆ ಇಂದು (ಸೆ.8) 'ರೆಡ್ ಅಲರ್ಟ್' ಘೋಷಿಸಲಾಗಿದೆ. , ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ನೀಡಲಾಗಿದೆ.

Karnataka Rain: ಕರ್ನಾಟಕದಲ್ಲಿ ಇಂದಿನಿಂದ ಸೆ. 11ರವರೆಗೆ ಭಾರೀ ಮಳೆ; ಕರಾವಳಿಗೆ ರೆಡ್ ಅಲರ್ಟ್​ ಘೋಷಣೆ
ಬೆಂಗಳೂರಿನಲ್ಲಿ ಮಳೆ
TV9 Web
| Edited By: |

Updated on: Sep 08, 2022 | 6:15 AM

Share

Bangalore Rains: ಕರ್ನಾಟಕದ ಕರಾವಳಿ (Coastal Karnataka) ಮತ್ತು ದಕ್ಷಿಣ ಒಳನಾಡಿನ ಎಲ್ಲ ಭಾಗದಲ್ಲೂ ಮುಂದಿನ 4 ದಿನ (ಸೆ.11) ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಇಂದು (ಸೆ.8) ‘ರೆಡ್ ಅಲರ್ಟ್’ (Red Alert) ಘೋಷಿಸಲಾಗಿದೆ. ಮಲೆನಾಡು ಭಾಗದಲ್ಲಿ, ಕೊಡಗು (Kodagu Rain), ಹಾಸನ, ಚಿಕ್ಕಮಗಳೂರು (Chikmagalur Rain) ಮತ್ತು ಶಿವಮೊಗ್ಗ (Shivamogga Rain), ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ (Udupi Rain) ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ನಾಳೆಯಿಂದ ಕರಾವಳಿಯ 3 ಜಿಲ್ಲೆಗಳು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗು ಸಹಿತ ಅಬ್ಬರ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸುಮಾರು 20 ಸೆಂ. ಮೀ.ಗಿಂತ ಹೆಚ್ಚು ಮಳೆ ಆಗಲಿದೆ.

ಇದನ್ನೂ ಓದಿ: Karnataka Rain: ಬೆಂಗಳೂರು, ಕರಾವಳಿ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ

ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಇಂದಿನಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದಿನಿಂದ ಸೆ. 11ರವರೆಗೆ ಭಾರೀ ಮಳೆಯಾಗಲಿದೆ. ಹೀಗಾಗಿ ಇಷ್ಟು ಜಿಲ್ಲೆಗಳಿಗೆ ‘ಹಳದಿ ಅಲರ್ಟ್’ ನೀಡಲಾಗಿದೆ.

ಬೆಂಗಳೂರು ನಗರದ ಉತ್ತರ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಿದ್ದರೆ, ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುತ್ತಿದೆ. ಈ ಮಳೆಯ ಆರ್ಭಟ ಇನ್ನೂ 3 ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ, ಗೋವಾ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಸಿಕ್ಕಿಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ತೆಲಂಗಾಣ ಮತ್ತು ತಮಿಳುನಾಡುಗಳಲ್ಲಿ ಕೂಡ ಗುಡುಗು ಸಹಿತ ಮಳೆಯಾಗಲಿದೆ.

ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ಸಾಧಾರಣ ಮಳೆಯಾಗಲಿದೆ. ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಒಣಹವೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು