Karnataka Rain: ಕರ್ನಾಟಕದಾದ್ಯಂತ ಜುಲೈ 9ರವರೆಗೆ ಭಾರೀ ಮಳೆ; ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ
Mangalore Rains: ಜುಲೈ 9ರವರೆಗೆ ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ.
Monsoon 2022: ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಭಾರೀ ಹೆಚ್ಚಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ಮಳೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಮುನ್ಸೂಚನೆಯ ಪ್ರಕಾರ, ಜುಲೈ 9ರವರೆಗೆ ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಬೆಳಗಾವಿ, ಹುಬ್ಬಳ್ಳಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಆಗಮನಕ್ಕೆ ಅಡಚಣೆಯಾಗಿದೆ. ಕರಾವಳಿಯಲ್ಲಿ ಪ್ರವಾಹ ಮತ್ತು ನಿರಂತರ ಮಳೆಯಿಂದಾಗಿ, ಭೂಕುಸಿತ ಉಂಟಾಗಿದ್ದು, ಹಲವೆಡೆ ರಸ್ತೆಗಳು ಕೊಚ್ಚಿಹೋಗಿವೆ.
ಕರ್ನಾಟಕದ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕಲಬುರ್ಗಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ. ರಾಜ್ಯದಲ್ಲಿ ಹಲವು ನದಿಗಳು ಅಪಾಯದ ಮಟ್ಟ ದಾಟಿದ್ದು, ಕೃಷಿ ಹೊಲಗಳು, ಜಮೀನುಗಳು ನೀರಿನಿಂದ ಜಲಾವೃತವಾಗಿವೆ. 1ನೇ ತರಗತಿಯ ಶಾಲಾ ಬಾಲಕಿಯ ಶವ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಚಿಕ್ಕಮಗಳೂರು ಜಿಲ್ಲೆಯ ತೊಗರಿಹಂಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಮವಾರ ತನ್ನ ಅಣ್ಣ ಮತ್ತು ಸ್ನೇಹಿತರೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬಾಲಕಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾಳೆ.
ಇದನ್ನೂ ಓದಿ: ಕೊಡಗಿನಲ್ಲಿ ಭಾರಿ ಮಳೆಗೆ ಬಿರುಕುಬಿಟ್ಟ ಮನೆ! ಚಿಕ್ಕಮಗಳೂರಿನಲ್ಲಿ ಕೊಚ್ಚಿ ಹೋದ ಬಾಲಕಿಗೆ ಮುಂದುವರೆದ ಶೋಧ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ.
#WeatherForecast | Today, heavy rain is likely over Odisha, East Madhya Pradesh, Karnataka, Kerala, Andhra Pradesh, Tamil Nadu, and East Rajasthan.
Extremely heavy rain may occur over Goa, Maharashtra and Gujarat. https://t.co/Vl0McgFf3k
— Urbadam India (@UrbadamIndia) July 6, 2022
ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ವಿಜಯಪುರ, ಯಾದಗಿರಿ ಮತ್ತು ಬೆಳಗಾವಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇಂದು ಮತ್ತು ಜುಲೈ 8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗಿಗೆ ಮಳೆಯಿಂದ ರೆಡ್ ಅಲರ್ಟ್ ನೀಡಲಾಗಿದೆ. ಮುಂದಿನ 3 ದಿನಗಳ ಕಾಲ ಬೆಳಗಾವಿ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rain: ಮಳೆಯಿಂದ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ; ಚಿಕ್ಕಮಗಳೂರಿನ ಶಾಲೆಗಳಿಗೆ ಇಂದು ರಜೆ
ಉತ್ತರ ಒಳನಾಡಿನ ಕರ್ನಾಟಕದ ಬೀದರ್, ಕಲ್ಬುರ್ಗಿ, ವಿಜಯಪುರ, ಯಾದಗಿರಿ ಮತ್ತು ಬೆಳಗಾವಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು IMD ಹೇಳಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.
IMD ಪ್ರಕಾರ, ದಕ್ಷಿಣ ರಾಜ್ಯದ ಕರಾವಳಿ ಪ್ರದೇಶದಲ್ಲಿ ಇಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತಗಳು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ. ಕರ್ನಾಟಕದ ಎರಡು ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಹಾಗೂ ಮನೆಗಳಿಗೆ ಹಾನಿಯಾಗಿದೆ. ಉಳ್ಳಾಲ ಮತ್ತು ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಮರವಂತೆ ಬೀಚ್‌ಗಳಂತಹ ಹಲವು ಭಾಗಗಳಲ್ಲಿ ಸಮುದ್ರ ಕೊರೆತದ ವರದಿಗಳೂ ದಾಖಲಾಗಿವೆ. ಈ ಪ್ರದೇಶಗಳಲ್ಲಿನ ರಸ್ತೆಗಳು ಸಹ ಮಳೆ ನೀರಿನಿಂದ ಜಲಾವೃತವಾಗಿದ್ದು, ಹಲವೆಡೆ ಸಂಚಾರ ಮತ್ತು ಇತರ ಅಡಚಣೆಗಳು ಉಂಟಾಗಿವೆ.
Three cars damaged as compound wall of MITE engineering college at Moodbidri near Mangaluru collapses due to heavy rain. Admission process was underway when the incident occured. No casualties reported @vinndz_TNIE @XpressBengaluru @ramupatil_TNIE @BSBommai @nalinkateel pic.twitter.com/6sMGt8zV2f
— Divya Cutinho_TNIE (@cutinha_divya) July 6, 2022
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಹಳ್ಳದಲ್ಲಿ ಒಂದನೇ ತರಗತಿಯ ಬಾಲಕಿ ಕೊಚ್ಚಿ ಹೋದ ಬೆನ್ನಲ್ಲೇ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಯ 6 ತಾಲೂಕುಗಳಲ್ಲಿ ಇನ್ನೂ 3 ದಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಎನ್. ಆರ್. ಪುರ, ಕೊಪ್ಪ, ಶೃಂಗೇರಿ ತಾಲೂಕುಗಳಲ್ಲಿ ಜುಲೈ 9ರವರೆಗೆ ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲೂ ವರುಣನ ಆರ್ಭಟ ಹೆಚ್ಚಾಗಿದ್ದು, ಮಲೆನಾಡು ಭಾಗದ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಕೆಲವು ಕಡೆ ಹೆದ್ದಾರಿಗಳಲ್ಲಿ ಗುಡ್ಡಗಳು ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಇದನ್ನೂ ಓದಿ: ಬೀದರ್ನಲ್ಲಿ ಸುರಿಯದ ಮಳೆರಾಯನನ್ನು ಸಂಪ್ರೀತಗೊಳಿಸಲು ಗೊಂಬೆಗಳ ಮದುವೆ ಮತ್ತು ಮೆರವಣಿಗೆ
ಇಂದು ಯಾವೆಲ್ಲ ರಾಜ್ಯಗಳಲ್ಲಿ ಮಳೆ?: ಮಧ್ಯಪ್ರದೇಶದ ಮೇಲಿನ ಕಡಿಮೆ ಒತ್ತಡದ ಪ್ರದೇಶ ಮತ್ತು ಸಂಬಂಧಿತ ಚಂಡಮಾರುತದ ಪರಿಚಲನೆಯು ಛತ್ತೀಸ್‌ಗಢದ ಮೇಲೆ ಭಾರಿ ಮಳೆಯನ್ನು ಉಂಟುಮಾಡುತ್ತದೆ, ಒಡಿಶಾ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತದೆ. ಕೊಂಕಣ, ಗೋವಾ ಮತ್ತು ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಗುಜರಾತ್, ಸೌರಾಷ್ಟ್ರ, ಕಚ್ ಮತ್ತು ಪೂರ್ವ ರಾಜಸ್ಥಾನದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಮಾಹೆ, ಕರಾವಳಿ ಆಂಧ್ರ ಪ್ರದೇಶ, ಯಾನಂ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಇಂದು ಮಳೆ ಹೆಚ್ಚಾಗಲಿದೆ.
ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಭಾರೀ ಮಳೆಯಾಗಲಿದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್‌ಗಢ, ತೆಲಂಗಾಣ, ಕರಾವಳಿ ಕರ್ನಾಟಕ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪೂರ್ವ ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಕರಾವಳಿ ಆಂಧ್ರಪ್ರದೇಶದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ರಾಜಸ್ಥಾನ ಮತ್ತು ರಾಯಲಸೀಮಾದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಬಿಹಾರ, ಉತ್ತರ ಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.