AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಭಾರೀ ಮಳೆಯಿಂದ ಮಲೆನಾಡು, ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ; ಕೊಡಗಿನಲ್ಲಿ ಇಂದು ಶಾಲಾ- ಕಾಲೇಜುಗಳಿಗೆ ರಜೆ

Karnataka Weather Today: ಮುಂದಿನ 4 ದಿನಗಳವರೆಗೂ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮಳೆಯ ಹಿನ್ನೆಲೆಯಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

Karnataka Rain: ಭಾರೀ ಮಳೆಯಿಂದ ಮಲೆನಾಡು, ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ; ಕೊಡಗಿನಲ್ಲಿ ಇಂದು ಶಾಲಾ- ಕಾಲೇಜುಗಳಿಗೆ ರಜೆ
ಮಳೆ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 06, 2022 | 5:55 AM

Share

Monsoon 2022: ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಾದ ತಮಿಳುನಾಡು (Tamil Nadu Rain), ಕೇರಳ (Kerala Rains), ಮಹಾರಾಷ್ಟ್ರದಲ್ಲೂ (Maharashtra Rain) ಮಳೆಯ ಆರ್ಭಟ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ (Bengaluru Rain) ಇಂದು ಮಳೆಯ ಹಿನ್ನೆಲೆಯಲ್ಲಿ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಆರೆಂಜ್ ಅಲರ್ಟ್​ (Orange Alert) ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದು ಕೊಡಗಿನಾದ್ಯಂತ (Kodagu Rain) ಮಳೆಯಿಂದ ರೆಡ್ ಅಲರ್ಟ್​ (Red Alert)  ಘೋಷಿಸಲಾಗಿದ್ದು,  ಶಾಲಾ‌- ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಭಾರೀ ಮಳೆಯಿಂದ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕಳೆದೊಂದು ವಾರದಲ್ಲಿ ರಾಜ್ಯದ ಒಳನಾಡಿನಲ್ಲಿ ಶೇ.500ರಷ್ಟು ಅಧಿಕ ಮಳೆಯಾಗಿ ದಾಖಲೆ ನಿರ್ಮಿಸಿದೆ. ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದ್ದು, ಕರಾವಳಿ ಮತ್ತು ಮಲೆನಾಡು ಹೊರತುಪಡಿಸಿದರೆ ಉಳಿದೆಡೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿದಿದೆ. ಹೊಲ-ಗದ್ದೆಗಳು ಜಲಾವೃತಗೊಂಡು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಾವೇರಿ ಕೊಳ್ಳದಲ್ಲಿ ಅಕ ಮಳೆಯಿಂದ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲೂ ಭಾರೀ ಮಳೆಯಾಗಿದೆ. ಇದರ ಪರಿಣಾಮವಾಗಿ, ಕರ್ನಾಟಕದಲ್ಲಿ ಇಂದಿನಿಂದ ಸೋಮವಾರದವರೆಗೆ ಗುಡುಗು ಮತ್ತು ಮಿಂಚುಗಳೊಂದಿಗೆ ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇನ್ನೂ ಮೂರು ದಿನ ಮಳೆ; ನೆರೆ ರಾಜ್ಯಗಳಲ್ಲೂ ಮಳೆಗಿಲ್ಲ ವಿರಾಮ

ಮುಂದಿನ 4 ದಿನಗಳವರೆಗೂ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್, ಆ. 7 ಮತ್ತು 8ರಂದು ಹಳದಿ ಅಲರ್ಟ್ ಜಾರಿಗೊಳಿಸಲಾಗಿದೆ.

ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಲ್ಲಿ ನೀರು ತೀವ್ರ ಮಟ್ಟಕ್ಕೆ ಏರಿದ್ದು, ಅಧಿಕಾರಿಗಳು ಸ್ವಲ್ಪಮಟ್ಟಿಗೆ ನೀರು ಬಿಡುವಂತೆ ಸೂಚಿಸಿದ್ದಾರೆ. ಇದರಿಂದಾಗಿ ಐತಿಹಾಸಿಕ ಶ್ರೀರಂಗಪಟ್ಟಣ ಪಟ್ಟಣದ ಕೆಲವು ಭಾಗಗಳು ಮತ್ತು ದೇವಾಲಯಗಳು ಜಲಾವೃತಗೊಂಡಿವೆ. ಕರಾವಳಿ ಭಾಗದಲ್ಲಿ ಇನ್ನೂ 4 ದಿನ ಮಳೆಯ ಅಬ್ಬರ ಇರಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಯಾವ ಜಿಲ್ಲೆಗಳಿಗೆ ಯಾವ ಅಲರ್ಟ್?: ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲ್ಬುರ್ಗಿ ವಿಜಯಪುರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಹಾಸನ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Karnataka Rains: ರಾಜ್ಯಾದ್ಯಂತ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ; ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಕೊಂಕಣ, ಗೋವಾ, ಮಹಾರಾಷ್ಟ್ರ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಅತಿ ಹೆಚ್ಚು ಬೀಳಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಮರಾಠವಾಡ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪೂರ್ವ ರಾಜಸ್ಥಾನ, ಗುಜರಾತ್ ಪ್ರದೇಶದಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ವಿದರ್ಭ, ಕರಾವಳಿ ಆಂಧ್ರ ಪ್ರದೇಶ ಮತ್ತು ಯಾನಂನಲ್ಲೂ ಮಳೆಯಾಗಲಿದೆ. ಬಿಹಾರ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಕಚ್, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದಂತೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕೇರಳದ ಪಥನಾಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಕೊಲ್ಲಂ, ಮಲಪ್ಪುರಂ, ಕೋಯಿಕ್ಕೋಡ್, ವಯನಾಡು ಮತ್ತು ಕಾಸರಗೋಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!